ಅಮೆರಿಕ: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನೆಗೆ ಎಫ್ ಬಿಐ ( ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್) ದಾಳಿ ನಡೆಸಿದೆ. ತಮ್ಮ ಅಧಿಕಾರಾವಧಿಯ ಬಳಿಕವೂ ಟ್ರಂಪ್ ಕೆಲವೊಂದು ಗೌಪ್ಯ ದಾಖಲೆಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದಾರೆ ಎಂಬ ಶಂಕೆಯ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಭದ್ರತಾ ಪಡೆ ಟ್ರಂಪ್ ಮನೆಯನ್ನು ಸುತ್ತುವರಿದಿದ್ದು, ಶೋಧ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ದಾಳಿಗೆ ಪ್ರತಿಕ್ರಿಯಿಸಿರುವ ಟ್ರಂಪ್, ದೇಶದಲ್ಲಿ ಕರಾಳ ಸಮಯವೊಂದು ನಡೆಯುತ್ತಿದೆ ಎಂದಿದ್ದಾರೆ.
ಇನ್ನು ಈ ದಾಳಿಯ ಬಗ್ಗೆ ವಿವರ ನೀಡಲು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.