ಉತ್ತರ ಇರಾನ್: ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಟೆಹ್ರಾನ್ ಉತ್ತರದ ಗಿಲಾನ್ ಪ್ರಾಂತ್ಯದ ಲಾಂಗ್ರುಡ್ ಪಟ್ಟಣದ ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ 27 ಜನರು ಸಾವನ್ನಪ್ಪಿದ್ದಾರೆ. ಮತ್ತು ಗಾಯಗೊಂಡಿರುವ 12 ಜನರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.