ಮಾಸ್ಕೊ: ರಷ್ಯಾದ ಮಾಸ್ಕೊದ ಆಗ್ನೇಯ ಜಿಲ್ಲೆಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ 8 ಜನರು ಬೆಂಕಿಗೆ ಆಹುತಿಯಾಗಿದ್ದು, ನಾಲ್ಪರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಮೊದಲಿಗೆ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ಮಧ್ಯರಾತ್ರಿಯ ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಬೆಂಕಿಯನ್ನು ನಂದಿಸಲಾಗಿದೆ. ಈ ವೇಳೆ 200ಕ್ಕೂ ಅಧಿಕ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ತುರ್ತು ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿ ಅನಾಹುತ ಸಂಭವಿಸಿದಾಗ ಫೈರ್ ಅಲಾರಾಂ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಅಲ್ಲದೆ, ಕಟ್ಟಡದ ಎಲ್ಲಾ ಕಿಟಕಿಗಳು ಕೂಡ ಲೋಹದವುಗಳಾಗಿದ್ದರಿಂದ ಜನರು ಒಳಗೆ ಸಿಲುಕಿಕೊಂಡಿದ್ದರು ಎಂದು ತುರ್ತು ಸೇವೆಗಳ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.