News Karnataka Kannada
Monday, April 29 2024
ವಿದೇಶ

ಪಾಕ್‌ನಲ್ಲಿ ಬಾಂಬ್​ ಸ್ಫೋಟ: ಐವರು ಸಾವು, 22 ಮಂದಿಗೆ ಗಾಯ

Five killed, 22 injured in bomb blast in Pakistan
Photo Credit : News Kannada

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಈ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಖೈಬರ್ ಪಖ್ತುಂಖ್ವಾದ ಡಿಐ ಖಾನ್‌ನ ಪೊಂಡಾ ಬಜಾರ್‌ನಲ್ಲಿರುವ ಟ್ಯಾಂಕ್ ಅಡ್ಡಾದಲ್ಲಿ ಸಂಭವಿಸಿದ ಸ್ಫೋಟದ ನಂತರ, ಹತ್ತಿರದ ಆಸ್ಪತ್ರೆಗಳಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ನಾಲ್ಕನೇ ಅತಿ ದೊಡ್ಡ ಸ್ಫೋಟ ಇದಾಗಿದೆ. ಸ್ಫೋಟಕ ಸಾಧನವನ್ನು ಮೋಟಾರ್ ಬೈಕ್‌ನಲ್ಲಿ ಅಳವಡಿಸಲಾಗಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್ ಸ್ಫೋಟ ಇದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು