ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಈ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಖೈಬರ್ ಪಖ್ತುಂಖ್ವಾದ ಡಿಐ ಖಾನ್ನ ಪೊಂಡಾ ಬಜಾರ್ನಲ್ಲಿರುವ ಟ್ಯಾಂಕ್ ಅಡ್ಡಾದಲ್ಲಿ ಸಂಭವಿಸಿದ ಸ್ಫೋಟದ ನಂತರ, ಹತ್ತಿರದ ಆಸ್ಪತ್ರೆಗಳಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ದೇಶದಲ್ಲಿ ನಾಲ್ಕನೇ ಅತಿ ದೊಡ್ಡ ಸ್ಫೋಟ ಇದಾಗಿದೆ. ಸ್ಫೋಟಕ ಸಾಧನವನ್ನು ಮೋಟಾರ್ ಬೈಕ್ನಲ್ಲಿ ಅಳವಡಿಸಲಾಗಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್ ಸ್ಫೋಟ ಇದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.