ಟೊಕಿಯೊ: ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಪಶ್ಚಿಮ ಜಪಾನ್ನ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಗುಂಡೇಟು ಬಿದ್ದಿದೆ ಎನ್ನಲಾಗಿದೆ.
ಗುಂಡೇಟಿನಿಂದ ಕುಸಿದುಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಎನ್ಎಚ್ಕೆ ಮಾಧ್ಯಮ ವರದಿ ಮಾಡಿದೆ. ಭಾಷಣ ಮಾಡುತ್ತಿದ್ದಾಗ ಶಿಂಜೊ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಶಂಕಿತ ಹಂತಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಘಟನೆ ಭಾರತೀಯ ಕಾಲಮಾನ ಪ್ರಕಾರ ಶುಕ್ರವಾರ ಬೆಳಗ್ಗೆ 8.30ಕ್ಕೆ ಸಂಭವಿಸಿದೆ. 67 ವರ್ಷದ ಅಬೆ ಅವರು ನಾರಾ ನಗರದ ರಸ್ತೆವೊಂದರ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದರು. ಈ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ವೇಳೆ ಎರಡು ಸುತ್ತು ಗುಂಡು ಹಾರಿಸಿದ ಶಬ್ದ ಕೇಳಿ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.