News Karnataka Kannada
Monday, May 13 2024
ವಿದೇಶ

4 ವರ್ಷದ ಬಳಿಕ ಪಾಕಿಸ್ತಾನಕ್ಕೆ ಮರಳಿದ ಮಾಜಿ ಪ್ರಧಾನಿ ನವಾಜ್ ಷರೀಫ್

Former PM Nawaz Sharif returns to Pakistan after 4 years
Photo Credit : News Kannada

ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಮುಖ್ಯಸ್ಥ ನವಾಜ್ ಷರೀಫ್ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಕೆಲವೇ ಗಂಟೆಗಳಲ್ಲಿ ತಾಯ್ನಾಡಿಗೆ ತೆರಳಲು ಸಿದ್ಧರಾಗಿದ್ದಾರೆ.

4 ನೇ ಬಾರಿಗೆ ಅಧಿಕಾರ ಗಳಿಸುವ ಪ್ರಯತ್ನದಲ್ಲಿ ಅವರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಮನ್ನಡೆಸಲಿದ್ದಾರೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣಗಳಲ್ಲಿ ಅವರು ನಿರೀಕ್ಷಣಾ ಜಾಮೀನು ಪಡೆದಿರುವ ಕಾರಣ ಸ್ವದೇಶಕ್ಕೆ ಮರಳಿದ ಬಳಿಕ ಅವರನ್ನು ಬಂಧಿಸುವ ಯಾವುದೇ ಸಾಧ್ಯತೆ ಇಲ್ಲ.

ದುಬೈ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ನವಾಜ್ ಷರೀಫ್ ಅವರು, 4 ವರ್ಷಗಳ ನಂತರ ಪಾಕಿಸ್ತಾನಕ್ಕೆ ತೆರಳುತ್ತಿದ್ದು, ಅಲ್ಲಾಹನ ಕೃಪೆಯಿಂದ ಇಂದು ನನಗೆ ಅತೀವ ಸಂತಸವಾಗುತ್ತಿದೆ. ಪಾಕಿಸ್ತಾನದಲ್ಲಿ ಪರಿಸ್ಥಿತಿ 2017ಕ್ಕಿಂತ ಉತ್ತಮವಾಗಿದ್ದರೆ ಎಷ್ಟು ಚೆನ್ನ ಎಂದು ಹೇಳಿದ್ದಾರೆ. ವಿಶೇಷ ವಿಮಾನದಲ್ಲಿ ಪಿಎಂಎಲ್-ಎನ್ ಕಾರ್ಯಕರ್ತರು “ನವಾಜ್ ಷರೀಫ್ ಮತ್ತೊಮ್ಮೆ ಪ್ರಧಾನಿಯಾಗಲಿ” ಎಂಬ ಘೋಷಣೆ ಕೂಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು