News Karnataka Kannada
Monday, April 29 2024
ವಿದೇಶ

ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿಯಾಗಿ ಮಾಜಿ ಪ್ರಧಾನಿ ಕ್ಯಾಮರೂನ್‌ ನೇಮಕ

Former Prime Minister Cameron takes over as UK Foreign Secretary
Photo Credit : News Kannada

ಲಂಡನ್: ಯುಕೆ ಪ್ರಧಾನಿ ರಿಷಿ ಸುನಕ್ ತಮ್ಮ ಸಂಪುಟ ವಿಸ್ತರಣೆ ಮಾಡುವ ಕಸರತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಬ್ರಿಟನ್‌ನ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರನ್ನು ಸೋಮವಾರ ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ.

ಕ್ಯಾಮರೂನ್ ಅವರನ್ನು ವಿದೇಶಾಂಗ, ಕಾಮನ್‌ವೆಲ್ತ್ ಮತ್ತು ಅಭಿವೃದ್ಧಿ ವ್ಯವಹಾರಗಳ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಡೌನಿಂಗ್ ಸ್ಟ್ರೀಟ್ ಹೇಳಿದೆ.

ಲಂಡನ್‌ನಲ್ಲಿ ನಡೆದ ಪ್ಯಾಲೆಸ್ಟೈನ್ ಪರ ಪ್ರತಿಭಟನೆ ವೇಳೆ ಪೊಲೀಸರ ಕಾರ್ಯವೈಖರಿ ವಿರೋಧಿಸಿ ಟೀಕಿಸಿ ಟೈಮ್ಸ್ ಪತ್ರಿಕೆಯಲ್ಲಿ ವಿವಾದಾತ್ಮಕ ಲೇಖನವನ್ನು ಬರೆದ ಕೆಲವು ದಿನಗಳ ನಂತರ, ಭಾರತೀಯ ಮೂಲದ ಸುಯೆಲ್ಲಾ ಬ್ರಾವರ್‌ಮನ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದರು. ಇದೀಗ ಕ್ಯಾಮರೂನ್‌ ಅವರನ್ನು ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು