ಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನ ಉಪನಗರದಲ್ಲಿ ಭಾನುವಾರ ಸಂಜೆ ಬೀದಿಯಲ್ಲಿ ಆಟವಾಡುತ್ತಿದ್ದ ಜನರ ಗುಂಪಿನ ಮೇಲೆ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಗುಂಡು ಹಾರಿಸಿದ ಬಳಿಕ ಅಪರಿಚಿತ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ. ದಾಳಿಕೋರನ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾರದ ಹಿಂದೆ ದಕ್ಷಿಣ ಆಫ್ರಿಕಾದ ಲೆನಾಸಿಯದಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿ ಪ್ರಕರಣದಲ್ಲಿ 20 ಜನರು ಮೃತಪಟ್ಟಿದ್ದರು.