Categories: ವಿದೇಶ

ಫ್ರಾನ್ಸ್‌: ನೈರುತ್ಯ ಫ್ರಾನ್ಸ್‌ನಲ್ಲಿ ಕಾಡ್ಗಿಚ್ಚು, ಸಾವಿರಾರು ಜನರ ಸ್ಥಳಾಂತರ

ಫ್ರಾನ್ಸ್‌: ನೈರುತ್ಯ ಫ್ರಾನ್ಸ್‌ನಲ್ಲಿ ಕಾಡ್ಗಿಚ್ಚು ಉಲ್ಬಣಗೊಂಡಿದ್ದು ಯುರೋಪ್‌ ನ ಕೆಲಭಾಗಗಳಲ್ಲಿ ಸಾವಿರಾರು ಜನರನ್ನು ತಮ್ಮ ಮನೆಗಳಿಂದ ಸ್ಥಳಾಂತರಿಸಲಾಗಿದೆ.

ಶನಿವಾರ ಮಧ್ಯಾಹ್ನದ ವೇಳೆಗೆ ಫ್ರಾನ್ಸ್‌ನ ಗಿರೊಂಡೆ ಪ್ರದೇಶದಿಂದ ಸುಮಾರು 14,000 ಜನರನ್ನು ಸ್ಥಳಾಂತರಿಸಲಾಗಿದೆ, 1,200 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟಿದ್ದಾರೆ ಎಂದು ಪ್ರಾದೇಶಿಕ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಫ್ರಾನ್ಸ್ ಮತ್ತು ಪೋರ್ಚುಗಲ್ ಮತ್ತು ಸ್ಪೇನ್ ಸೇರಿದಂತೆ ಇತರ ಯುರೋಪಿಯನ್ ರಾಷ್ಟ್ರಗಳ ಮೂಲಕ ಕಾಡ್ಗಿಚ್ಚು ಹರಡುತ್ತಿದ್ದು ಗಿರೊಂಡೆ ಪ್ರದೇಶದಲ್ಲಿ ಶನಿವಾರ 10,000 ಹೆಕ್ಟೇರ್ (25,000 ಎಕರೆ) ಗಿಂತ ಹೆಚ್ಚು ಭೂಮಿ ಬೆಂಕಿಗಾಹುತಿಯಾಗಿದೆ. ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳಿಗೆ ಜಾಗರೂಕರಾಗಿರುವಂತೆ ತಿಳಿಸಲಾಗಿದ್ದು ಪಶ್ಚಿಮ ಫ್ರಾನ್ಸ್‌ನಲ್ಲಿನ ಶಾಖದ ಅಲೆಯು ಉತ್ತುಂಗಕ್ಕೇರಲಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೇ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ (104 ಫ್ಯಾರನ್‌ಹೀಟ್) ಗಿಂತ ಹೆಚ್ಚಾಗಲಿದೆ ಎನ್ನಲಾಗಿದೆ.

ನೆರೆಯ ನೆರೆಯ ಸ್ಪೇನ್‌ನಲ್ಲಿ ತಾಪಮಾನವು 45.7 C (114 F) ತಲುಪಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡುತ್ತಿದ್ದಾರೆ.

ಕಾರ್ಲೋಸ್ III ಹೆಲ್ತ್ ಇನ್‌ಸ್ಟಿಟ್ಯೂಟ್‌ನ ಅಂಕಿಅಂಶಗಳ ಪ್ರಕಾರ, ಕಳೆದ ಕೆಲ ವಾರಗಳಲ್ಲಿ ಶಾಖದಲೆಗಳ ಹೊಡೆತದಿಂದ 360 ಸಾವು ಸಂಬಂಧಿಸಿದೆ. ಉತ್ತರ ಯುರೋಪಿಯನ್ ಪ್ರವಾಸಿಗರಲ್ಲಿ ಜನಪ್ರಿಯವಾಗಿರುವ ಮಲಗಾ ಪ್ರಾಂತ್ಯದ ಪಟ್ಟಣವಾದ ಮಿಜಾಸ್ ಬಳಿ ದೊಡ್ಡ ಕಾಡ್ಗಿಚ್ಚಿನ ಕಾರಣ 3,000 ಕ್ಕೂ ಹೆಚ್ಚು ಜನರನ್ನು ಮನೆಗಳಿಂದ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

Sneha Gowda

Recent Posts

ಪತ್ರಿಕಾ ವಿತರಕ ರೈಲಿಗೆ ಸಿಲುಕಿ ಆತ್ಮಹತ್ಯೆ

ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.

12 mins ago

ಮಲೆ ಮಾದಪ್ಪನಿಗೆ ಬೆಳ್ಳಿ ಆರತಿ ತಟ್ಟೆ ನೀಡಿದ ದಾನಿ : ಹೇಗಿದೆ ಗೊತ್ತಾ?

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಶ್ರೀ ಮಲೆ ಮಹದೇಶ್ವರನಿಗೆ ಬೆಂಗಳೂರಿನ ನಾಗಮಣಿ.ಎಂ ಮತ್ತು ಕುಟುಂಬ 01 ಕೆಜಿ…

21 mins ago

ಭಯಾನಕ ದೃಶ್ಯ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ತಗುಲಿ 10 ಮಂದಿಗೆ ಗಾಯ

  ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಭಯಾನಕ ಘಟನೆ…

37 mins ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

57 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

1 hour ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

1 hour ago