ಜೆರುಸಲೇಂ: ಸೆಂಟ್ರಲ್ ಗಾಜಾದ ಶಿಬಿರವೊಂದರ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಸುಮಾರು 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಸೆಂಟ್ರಲ್ ಗಾಜಾ ಪಟ್ಟಿಯಲ್ಲಿರುವ ಅಲ್-ಮಘಾಝಿ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 30 ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ದೇರ್ ಅಲ್ ಬಾಲಾಹ್ ನಲ್ಲಿರುವ ಅಲ್ ಅಕ್ತಾ ಮಾರ್ಟಿಯಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸಚಿವಾಲಯದ ವಕ್ತಾರ ಆಶ್ರಫ್ ಅಲ್ ಕುದ್ರಾ ತಿಳಿಸಿದ್ದಾರೆ. ವೈಮಾನಿಕ ದಾಳಿಯಿಂದ ಹಲವು ಮನೆಗಳು ನೆಲಸಮಗೊಂಡಿವೆ ಎಂದು ಅವರು ಹೇಳಿದ್ದಾರೆ.