News Karnataka Kannada
Friday, May 03 2024
ವಿದೇಶ

ಜಿನೀವಾ: ವಿಶ್ವ ಆರೋಗ್ಯ ಸಂಸ್ಥೆಗೆ 75 ವರ್ಷ ಪೂರ್ಣ

The World Health Organization (WHO) completes 75 years
Photo Credit : IANS

ಜಿನೀವಾ: ವಿಶ್ವ ಆರೋಗ್ಯ ಸಂಸ್ಥೆ 75 ವರ್ಷಗಳನ್ನು ಪೂರೈಸಿದ್ದು, ಈ ವೇಳೆ ಆರೋಗ್ಯ ಸಮಾನತೆಗೆ ಒತ್ತು ನೀಡುವುದು ಅಗತ್ಯ ಎಂದು ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಹೇಳಿದ್ದಾರೆ.

ಎಪ್ಪತ್ತೈದು ವರ್ಷಗಳ ಹಿಂದೆ, ವರ್ಷಗಳ ಯುದ್ಧದ ನಂತರ, ಪ್ರಪಂಚದ ರಾಷ್ಟ್ರಗಳು ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪಿಸಲು ಒಪ್ಪಿಕೊಂಡವು ಎಂದು ಪತ್ರಿಕಾಗೋಷ್ಠಿಯಲ್ಲಿ ನೆನಪಿಸಿಕೊಂಡರು. “ನಾಳೆ ವಿಶ್ವ ಆರೋಗ್ಯ ಸಂಸ್ಥೆ ಸಂವಿಧಾನ ಜಾರಿಗೆ ಬಂದು 75 ವರ್ಷವಾಗುತ್ತದೆ. ಇದೊಂದು ದಾಖಲೆ ಎಂದು ಅವರು ಹೇಳಿದರು. ಕಳೆದ ದಶಕಗಳಲ್ಲಿ ಸಿಡುಬು, ಪೋಲಿಯೊ ನಿರ್ಮೂಲನೆಗೆ ವ್ಯಾಪಕ ಕ್ರಮಗಳ ಮೂಲಕ ಲಕ್ಷಾಂತರ ಜೀವ ಉಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕೋವಿಡ್‌ ನಿಭಾವಣೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಹತ್ತರ ಪಾತ್ರವಹಿಸಿದ್ದು, ಶತಮಾನದ ಆರೋಗ್ಯ ಬಿಕ್ಕಟ್ಟು ನಿರ್ವಹಣೆಯಲ್ಲಿ ಮಹತ್ತರ ಪಾತ್ರವಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು