News Karnataka Kannada
Monday, May 06 2024
ವಿದೇಶ

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ: ಹಮಾಸ್ ಘೋಷಣೆ

Hamas threatens to release hostages if Israel stops bombing
Photo Credit : IANS

ಇಸ್ರೇಲ್: ಗಾಜಾದಲ್ಲಿ ಬಾಂಬ್ ದಾಳಿ ನಿಲ್ಲಿಸಿದರೆ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿದೆ. ಅ. 7 ರಂದು ಹಮಾಸ್ ಮೊದಲ ಬಾರಿಗೆ ಇಸ್ರೇಲ್​ ಮೇಲೆ 5 ಸಾವಿರಕ್ಕೂ ಹೆಚ್ಚು ರಾಕೆಟ್​ಗಳಿಂದ ದಾಳಿ ನಡೆಸಿತ್ತು. ಅಷ್ಟೇ ಅಲ್ಲದೆ ಕಂಡ ಕಂಡಲ್ಲಿ ಜನರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಅದಕ್ಕೆ ಪ್ರತಿಯಾಗಿ ಇಸ್ರೇಲ್​ ಗಾಜಾ ಮೇಲೆ ಬಾಂಬ್ ದಾಳಿ ನಡೆಸಿದೆ. ಒಟ್ಟಾರೆ ಘಟನೆಯಲ್ಲಿ ಇದುವರೆಗೆ 4 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಈ ನಡುವೆ ಇಸ್ರೇಲ್ ಗಾಜಾದ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಿದರೆ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ಹಿರಿಯ ಹಮಾಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಸ್ರೇಲಿ ಪಡೆಗಳು ಗಾಜಾ ಪಟ್ಟಿಯಲ್ಲಿ ತಮ್ಮ ಸೇನಾ ದಾಳಿಯನ್ನು ಸ್ಥಗಿತಗೊಳಿಸಿದರೆ ಒಂದು ಗಂಟೆಯೊಳಗೆ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಅಧಿಕಾರಿ ಸಿದ್ಧ ಎಂದು ವರದಿ ಹೇಳಿದೆ . ಮಂಗಳವಾರ ಇಸ್ರೇಲ್​ ಆಸ್ಪತ್ರೆಯೊಂದರ ಮೇಲೆ ಬಾಂಬ್ ದಾಳಿ ನಡೆಸಿದ್ದು ಇದರಲ್ಲಿ ಸುಮಾರು 500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು, ಇದಾದ ಬಳಿಕ ಹಮಾಸ್ ಈ ಹೇಳಿಕೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು