Categories: ವಿದೇಶ

ಹ್ಯಾನ್ಸ್ ಚಂಡಮಾರುತ ಎಫೆಕ್ಟ್‌: ಅಣೆಕಟ್ಟು ಭಾಗಶಃ ಕುಸಿತ

ಓಸ್ಲೋ: ಹ್ಯಾನ್ಸ್ ಚಂಡಮಾರುತದಿಂದ ನಾರ್ವೆ ದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜಧಾನಿ ಓಸ್ಲೋದಿಂದ ಈಶಾನ್ಯಕ್ಕೆ ಸುಮಾರು 150 ಕಿಮೀ ದೂರದಲ್ಲಿರುವ ಬ್ರಾಸ್ಕೆರೆಡ್‌ಫಾಸ್‌ನಲ್ಲಿರುವ ಅಣೆಕಟ್ಟು ಭಾಗಶಃ ಕುಸಿದಿದೆ.

ಅನಿರೀಕ್ಷಿತ ಪ್ರವಾಹದಿಂದ ಅಣೆಕಟ್ಟಿನ ಫ್ಲಡ್‌ಗೇಟ್‌ಗಳು ಸರಿಯಾಗಿ ಕಾರ್ಯನಿರ್ವಹಿಸದೇ ಈ ದುರ್ಘಟನೆ ನಡೆದಿದೆ. ಬ್ರಾಸ್ಕೆರೆಡ್‌ಫಾಸ್‌ನಿಂದ ಕೆಳಗಿರುವ ಮೂರು ವಿದ್ಯುತ್ ಕೇಂದ್ರಗಳು ಹಾನಿಗೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದಿಂದ ಹ್ಯಾನ್ಸ್ ಚಂಡಮಾರುತವು ನಾರ್ವೆಯನ್ನು ಜರ್ಜರಿತಗೊಳಿಸಿದ್ದು, ಪರಿಣಾಮವಾಗಿ 4,000 ಕ್ಕೂ ಹೆಚ್ಚು ಆಸ್ತಿಗಳಿಗೆ ಹಾನಿಯಾಗಿದೆ.

ಪ್ರವಾಹ, ಚಂಡಮಾರುತದಿಂದಾಗಿ 900 ಮಿಲಿಯನ್ ಕ್ರೋನರ್ ($88 ಮಿಲಿಯನ್) ಹಾನಿ ಉಂಟಾಗಿದೆ ಎಂದು ವರದಿಗಳು ಹೇಳಿವೆ. ಚಂಡಮಾರುತ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಸರ್ಕಾರ ಹೆಲಿಕಾಪ್ಟರ್ ಒದಗಿಸಿದೆ ಎಂದು ನಾರ್ವೆ ಸಚಿವ ಎಮಿಲಿ ಎಂಗರ್ ಮೆಹ್ಲ್ ತಿಳಿಸಿದ್ದಾರೆ.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

4 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

4 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

5 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

5 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

5 hours ago