ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆರು ಮಕ್ಕಳ ಮುಂದೆಯೇ ಹತ್ಯೆ ಮಾಡಿ, ಮೃತದೇಹವನ್ನು ಕಡಾಯಿಯಲ್ಲಿ ಬೇಯಿಸಿದ ಈ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ನರ್ಗೀಸ್ ಎಂದು ಗುರುತಿಸಲಾಗಿದ್ದು, ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆ ಕೋಣೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆರೋಪಿ ಪತಿ ‘ಆಶಿಕ್’ ಬಜಾರ್ ಎಜೆನ್ಸಿಯ ಶಾಲೆಯಲ್ಲಿ ವಾಚ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಳಿಕ ಆರೋಪಿ ತನ್ನ ಮೂವರು ಮಕ್ಕಳಗಳ ಜೊತೆ ಪರಾರಿಯಾಗಿದ್ದು, ಆತನ 15 ವರ್ಷದ ಪುತ್ರಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ಇದೀಗ ಮೂವರು ಮಕ್ಕಳನ್ನು ಪಾಲನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೂರ್ವ ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಅಬ್ದುರ್ ರಹೀಮ್ ಶೆರಾಜಿ ಮಾಹಿತಿ ನೀಡಿದ್ದಾರೆ.
ಆರೋಪಿ ಮೊದಲು ಪತ್ನಿಯನ್ನು ದಿಂಬಿನಿಂದ ಮೂಗು, ಬಾಯಿಯನ್ನು ಅಮುಕಿ ಕೊಲೆ ಮಾಡಿದ್ದಾನೆ. ನಂತರ ಮಕ್ಕಳ ಮುಂದೆಯೇ ಕಡಾಯಿಯಲ್ಲಿ ಬೇಯಿಸಿದ್ದಾನೆ. ಅಲ್ಲದೇ ಮಹಿಳೆಯ ಒಂದು ಕಾಲು ಕೂಡ ದೇಹದಿಂದ ಬೇರ್ಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.