Categories: ವಿದೇಶ

ಜಾಬ್‌ ಲೆಸ್‌ ಆಗಿದ್ದೆ, ಆತಂಕದಿಂದ ವಿಮಾನ ಬಾಗಿಲು ತೆರೆದೆ: ವಿಚಾರಣೆ ವೇಳೆ ಪ್ರಯಾಣಿಕನ ಹೇಳಿಕೆ

ಸಿಯೋಲ್: ದಕ್ಷಿಣ ಕೊರಿಯಾದ ವಿಮಾನ ನಿಲ್ದಾಣದಲ್ಲಿ ಇಳಿಯುವ ಮುನ್ನ ಏಷಿಯಾನ ಏರ್‌ಲೈನ್ಸ್ ವಿಮಾನದ ಬಾಗಿಲು ತೆರೆದ ಪ್ರಯಾಣಿಕನ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರಿಗೆ ಆತ ಹೇಳಿದ್ದಿಷ್ಟು ನನಗೆ ವಿಮಾನದಲ್ಲಿ ಉಸಿರುಗಟ್ಟಿದಂತಾಗಿತ್ತು. ಅದಕ್ಕಾಗಿ ಬೇಗ ಇಳಿಯಬೇಕು ಎಂದೆನಿಸಿತು ಹಾಗಾಗಿ ಬಾಗಿಲು ತೆರೆದೆ ಎಂದು ಹೇಳಿದ್ದಾರೆ.

ಶುಕ್ರವಾರ, ಸಿಯೋಲ್‌ನಿಂದ ಆಗ್ನೇಯಕ್ಕೆ 237 ಕಿಮೀ ದೂರದಲ್ಲಿರುವ ಡೇಗು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ವಿಮಾನದ ಬಾಗಿಲನ್ನು ಪ್ರಯಾಣಿಕ ತೆರೆದಿದ್ದರು. ಈ ಕೆಲಸ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಪ್ರಯಾಣಿಕ ಮೇಲಿನಂತೆ ವಿವರಣೆ ನೀಡಿದ್ದಾರೆ ಎಂದು ಯೋನ್‌ಹಾಪ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ತಾನು ಇತ್ತೀಚೆಗೆ ಕೆಲಸ ಕಳೆದುಕೊಂಡಿದ್ದೆ ನಂತರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ ಎಂದು ಹೇಳಿದ್ದಾರೆ. ಅಲ್ಲದೆ ವಿಮಾನದಿಂದ ಬೇಗನೆ ಹೊರಬರಲು ಬಯಸಿದ್ದರಿಂದ ಬಾಗಿಲು ತೆರೆದಿದ್ದೇನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ವಿಮಾನದಲ್ಲಿದ್ದ 194 ಜನರಲ್ಲಿ ಯಾರೊಬ್ಬರೂ ಕೆಳಗೆ ಬಿದ್ದಿಲ್ಲ ಅಥವಾ ಗಾಯಗೊಂಡಿಲ್ಲ, ಆದರೆ 12 ಪ್ರಯಾಣಿಕರು ಆತಂಕದಿಂದ ಉಸಿರಾಟ ಸಮಸ್ಯೆ ಎದುರಿಸಿದ್ದರು. ಹಲವರನ್ನು ಇದಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಮಾನವು ಜೆಜುನಿಂದ ಡೇಗುಗೆ ತೆರಳುತ್ತಿತ್ತು.

Gayathri SG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

3 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

4 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

4 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

4 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

5 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

5 hours ago