News Karnataka Kannada
Monday, April 29 2024
ವಿದೇಶ

ರಷ್ಯಾ ಸರ್ಕಾರಿ ಅಧಿಕಾರಿಗಳಿಗೆ ಐಫೋನ್‌ ನಿಷೇಧ

IPhone banned for Russian government officials
Photo Credit : IANS

ಮಾಸ್ಕೋ: ರಷ್ಯಾದ ಸರ್ಕಾರಿ ಅಧಿಕಾರಿಗಳು ಐಫೋನ್‌ ಗಳನ್ನು ಬಳಸದಂತೆ ನಿಷೇಧ ಹೇರಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವಿಸ್ (ಎಫ್‌ಎಸ್‌ಎಸ್) ನ ಅಧಿಕಾರಿಗಳಿಗೆ ಐಫೋನ್‌ ಮತ್ತು ಐಪ್ಯಾಡ್‌ಗಳಂತಹ ಆಪಲ್ ಉತ್ಪನ್ನಗಳನ್ನು ಬಳಸುವುದನ್ನು ನಿಲ್ಲಿಸುವಂತೆ ಸೂಚಿಸಿದೆ ಎಂದು ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದೆ.

ಜುಲೈ 17 ರಿಂದ, ರಷ್ಯಾದ ಸಚಿವಾಲಯದ ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಐಫೋನ್‌ಗಳನ್ನು ಬಳಸದಂತೆ ಸೂಚಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಎಫ್‌ಎಸ್‌ಬಿ ಉದ್ಯೋಗಿಗಳು ಐಫೋನ್‌ಗಳನ್ನು ಬಳಸಬಾರದು. ಈ ನಿಟ್ಟಿನಲ್ಲಿ ಪರ್ಯಾಯ ಸಂಪರ್ಕ ಸಾಧನಗಳನ್ನು ಹುಡುಕುತ್ತಿದ್ದೇವೆ ಎಂದು ಅಧಿಕಾರಿಗಳು ಸೂಚನೆಯಲ್ಲಿ ತಿಳಿಸಿದ್ದಾರೆ. ಅಮೆರಿಕ ಬೆಹುಗಾರಿಕಾ ಅಧಿಕಾರಿಗಳು ಫೋನ್‌ ಟ್ಯಾಪ್‌ ಮಾಡುತ್ತಿರಬಹುದು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು