News Karnataka Kannada
Friday, May 03 2024
ವಿದೇಶ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸೈನಿಕರು-ಭಯೋತ್ಪಾದಕರ ನಡುವೆ ಘರ್ಷಣೆ, 5 ಸಾವು

Security forces kill terror commander
Photo Credit : Pixabay

ಇಸ್ಲಾಮಾಬಾದ್: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಮತ್ತು ಇಬ್ಬರು ಭಯೋತ್ಪಾದಕರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಮಿಲಿಟರಿ ಹೇಳಿಕೆ ತಿಳಿಸಿದೆ.

ಕುರ್ರಾಮ್ ಬುಡಕಟ್ಟು ಜಿಲ್ಲೆಯಲ್ಲಿ ತೀವ್ರ ಗುಂಡಿನ ಕಾಳಗ ನಡೆದಿದ್ದು, ನಂತರ ಸೇನಾ ಪಡೆಗಳು ಹತ್ಯೆಗೀಡಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಮಿಲಿಟರಿಯ ಮಾಧ್ಯಮ ವಿಭಾಗ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್ಪಿಆರ್) ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರದೇಶದಲ್ಲಿ ಕಂಡುಬರುವ ಯಾವುದೇ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಈ ಪ್ರದೇಶವನ್ನು ಸ್ಯಾನಿಟೈಸೇಶನ್ ಮಾಡಲಾಗುತ್ತಿದೆ ಎಂದು ಮಾಧ್ಯಮಗಳು  ವರದಿ ಉಲ್ಲೇಖಿಸಿದೆ.

“ಪಾಕಿಸ್ತಾನದ ಸೇನೆಯು ಭಯೋತ್ಪಾದನೆಯ ಪಿಡುಗನ್ನು ತೊಡೆದುಹಾಕಲು ದೃಢಸಂಕಲ್ಪ ಹೊಂದಿದೆ, ಮತ್ತು ನಮ್ಮ ಧೈರ್ಯಶಾಲಿ ಸೈನಿಕರ ಇಂತಹ ತ್ಯಾಗಗಳು ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು