ಇಸ್ಲಾಮಾಬಾದ್: ಪಾಕಿಸ್ತಾನದ ನೈರುತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪ್ರಾಂತೀಯ ರಾಜಧಾನಿ ಕ್ವೆಟ್ಟಾದ ಹೊರವಲಯದಲ್ಲಿ ಶನಿವಾರ ಈ ಘಟನೆ ನಡೆದಿದೆ. ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರೂ ಮೃತಪಟ್ಟಿದ್ದು, ಇಬ್ಬರು ದಾರಿಹೋಕರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಕಳಪೆ ನಿರ್ವಹಣೆಯ ರಸ್ತೆಗಳು, ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಮತ್ತು ಅಜಾಗರೂಕತೆಯ ಚಾಲನೆಯಿಂದಾಗಿ ಪಾಕಿಸ್ತಾನದಲ್ಲಿ ಆಗಾಗ್ಗೆ ರಸ್ತೆ ಅಪಘಾತಗಳು ಸಂಭವಿಸುತ್ತವೆ.