ಇಸ್ಲಾಮಾಬಾದ್: ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, 17 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಈ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಪ್ರಾಂತೀಯ ರಾಜಧಾನಿ ಕ್ವೆಟ್ಟಾದ ಜನನಿಬಿಡ ರಸ್ತೆಯಲ್ಲಿ ಅಪರಿಚಿತ ಉಗ್ರರು ಹ್ಯಾಂಡ್ ಗ್ರೆನೇಡ್ ಎಸೆದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಮಕ್ಕಳು ಸೇರಿದಂತೆ ಗಾಯಗೊಂಡವರನ್ನು ಕ್ವೆಟ್ಟಾ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಯಾವುದೇ ಗುಂಪು ಇನ್ನೂ ದಾಳಿಯನ್ನು ಹೇಳಿಕೊಂಡಿಲ್ಲ, ಮತ್ತು ಪಲಾಯನ ಮಾಡಿದ ಉಗ್ರರನ್ನು ಬೆನ್ನಟ್ಟಲು ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.