News Karnataka Kannada
Monday, April 29 2024
ವಿದೇಶ

ಇಸ್ಲಾಮಿಕ್ ವಿದ್ವಾಂಸ ತಾರಿಕ್ ಪುತ್ರ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Islamic scholar Tariq's son commits suicide by shooting himself in the chest
Photo Credit : IANS

ಪಾಕಿಸ್ತಾನ: ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಅವರ ಪುತ್ರ ಆಸಿಮ್ ಜಮೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೌಲಾನಾ ಮಾಹಿತಿ ನೀಡಿದ್ದಾರೆ, ತನ್ನ ಮಗ ಆಸೀಮ್ ಜಮೀಲ್ ಇಂದು ತಲಂಬಾದಲ್ಲಿ ಮೃತಪಟ್ಟಿದ್ದಾನೆ. ಈ ಹಠಾತ್ ಸಾವಿನ ಶಾಕ್​ನಿಂದ ನಮಗೆ ಹೊರಬರಲಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.

ತಲಂಬಾದಲ್ಲಿರುವ ತಮ್ಮ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಎದೆಗೆ ಗುಂಡು ತಗುಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ಮತ್ತು ಫೋರೆನ್ಸಿಕ್ ತಂಡವು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿನ ಕಾರಣದ ಬಗ್ಗೆ ಇನ್ನೂ ಏನೂ ಸ್ಪಷ್ಟಪಡಿಸಲಾಗಿಲ್ಲ.

ಆಸಿಮ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು, ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಪುತ್ರ ಆಸೀಮ್ ಫಾರ್ಮ್‌ಹೌಸ್‌ನಲ್ಲಿರುವ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದರು, ಸಿಬ್ಬಂದಿಯೊಬ್ಬರು ಅವರ ಸುರಕ್ಷತೆಗಾಗಿ ಅಲ್ಲೇ ಇದ್ದರು. ಆದರೆ ಆಸೀಮ್ ಸಿಬ್ಬಂದಿಯಿಂದ ಪಿಸ್ತೂಲ್ ತೆಗೆದುಕೊಂಡು ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು