Categories: ವಿದೇಶ

ಇಸ್ರೇಲ್‌ ಹಮಾಸ್‌ ಸಂಘರ್ಷ: ಗಾಜಾ ಮಸೀದಿ ಮೇಲೆ ಇಸ್ರೇಲ್‌ ದಾಳಿ

ಜೆರೇಸಲೇಂ: ಇಸ್ರೇಲ್‌ ಹಮಾಸ್‌ ಸಂಘರ್ಷ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗಾಜಾದ ವೆಸ್ಟ್​ ಬ್ಯಾಂಕ್​ನ ಜೆನಿನ್ ನಗರದಲ್ಲಿರುವ ಅಲ್​-ಅನ್ಸಾರ್ ಮಸೀದಿ ಸಂಕೀರ್ಣದಲ್ಲಿರುವ ಭಯೋತ್ಪಾದಕ ಸಂಘಟನೆ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದ್ ಕಮಾಂಡ್ ಸೆಂಟರ್ ಮೇಲೆ ಇಸ್ರೇಲಿ ಸೇನೆ ವೈಮಾನಿಕ ದಾಳಿ ನಡೆಸಿದೆ.

ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ. ಆದರೆ, ಇದು ಇನ್ನೂ ದೃಢಪಟ್ಟಿಲ್ಲ. ಇದಕ್ಕೂ ಮುನ್ನ ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಮಕ್ಕಳು ಸೇರಿದಂತೆ 13 ಪ್ಯಾಲೆಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದರು.

ಹಮಾಸ್ ಹೋರಾಟಗಾರರು ಮಸೀದಿಯನ್ನು ಕಮಾಂಡ್ ಸೆಂಟರ್ ಮಾಡಿದ್ದಾರೆ ಎಂದು ಭದ್ರತಾ ಗುಪ್ತಚರ ಮಾಹಿತಿ ಲಭ್ಯವಾಗಿತ್ತು ಎಂದು ಇಸ್ರೇಲ್ ರಕ್ಷಣಾ ಪಡೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದೆ.

Sneha Gowda

Recent Posts

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

11 mins ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

15 mins ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

27 mins ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

30 mins ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

42 mins ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

1 hour ago