Categories: ವಿದೇಶ

ಸಿರಿಯಾ ವಿಮಾನ ನಿಲ್ದಾಣದ ಮೇಲೆ ಮತ್ತೆ ದಾಳಿ ನಡೆಸಿದ ಇಸ್ರೇಲ್‌

ಡಮಾಸ್ಕಸ್: ಸಿರಿಯಾದ ಉತ್ತರ ಪ್ರಾಂತ್ಯದ ಅಲೆಪ್ಪೊದಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಇಸ್ರೇಲ್ ಕ್ಷಿಪಣಿ ದಾಳಿಗೆ ತುತ್ತಾಗಿದ್ದು, ಇತ್ತೀಚೆಗೆ ದುರಸ್ತಿ ಮಾಡಿದ ರನ್‌ವೇಗೆ ಹಾನಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗುರುವಾರ ರಾಜಧಾನಿ ಡಮಾಸ್ಕಸ್ ಮತ್ತು ಅಲೆಪ್ಪೊದಲ್ಲಿನ ವಿಮಾನ ನಿಲ್ದಾಣಗಳ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿದ್ದವು. ಇದೀಗ ಮತ್ತೆ
ಅಲೆಪ್ಪೊ ವಿಮಾನ ನಿಲ್ದಾಣಕ್ಕೆ ದಾಳಿ ನಡೆದಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ಶನಿವಾರ ವರದಿ ಮಾಡಿದೆ.

ಸಿರಿಯನ್ ಸಿವಿಲ್ ಏವಿಯೇಷನ್‌ನ ಮುಖ್ಯಸ್ಥ ಬಸ್ಸೆಮ್ ಮನ್ಸೂರ್, ರನ್‌ ವೇಗೆ ಹಾನಿಯಾಗಿದ್ದು ವಿಮಾನ ನಿಲ್ದಾಣದ  ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಗುರುವಾರದ ದಾಳಿಯ ನಂತರ ರನ್‌ ವೇ ದುರಸ್ತಿ ಮಾಡಿ ಶನಿವಾರ ವಿಮಾನ ನಿಲ್ದಾಣವು ಸೇವೆಯನ್ನು ಪುನರಾರಂಭಿಸಿತ್ತು.

Ashika S

Recent Posts

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

13 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

34 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

52 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

1 hour ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago