Categories: ವಿದೇಶ

ಹಮಾಸ್‌ನ 3 ಪ್ರಮುಖ ಉಗ್ರರನ್ನು ಮುಗಿಸಿದ ಇಸ್ರೇಲ್‌

ಜೆರುಸಲೇಂ: ಗಾಜಾ ನಗರದ ಮೇಲೆ ಪೂರ್ಣ ಪ್ರಮಾಣದ ದಾಳಿ ಮಾಡುವ ಉತ್ಸಾಹದಲ್ಲಿರುವ ಇಸ್ರೇಲ್‌ ಈಗ ಮೂವರು ಪ್ರಮುಖ ಹಮಾಸ್‌ ಉಗ್ರರನ್ನು ಹೊಡೆದುರುಳಿಸಿದೆ. ಹಮಾಸ್‌ ಉಗ್ರ ಸಂಘಟನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ, ಇಸ್ರೇಲ್‌ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಮೂವರು ಹಿರಿಯ ಹಮಾಸ್‌ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ರಕ್ಷಣಾ ಪಡೆಯೇ ಹತ ಉಗ್ರರ ಫೋಟೊಗಳ ಸಮೇತ ಮಾಹಿತಿ ನೀಡಿದೆ.

ʼಐಡಿಎಫ್‌ ಹಾಗೂ ಗುಪ್ತಚರ ಇಲಾಖೆಯ ನಿಖರ ಮಾಹಿತಿ ಮೇರೆಗೆ ಐಡಿಎಫ್‌ ಯುದ್ಧವಿಮಾನಗಳ ಮೂಲಕ ದಾಳಿ ನಡೆಸಿ, ಹಮಾಸ್‌ನ ದರಾಜ್‌ ತುಫಾ ಬೆಟಾಲಿಯನ್‌ನ ಮೂವರು ಪ್ರಮುಖ ಉಗ್ರರನ್ನು ಹತ್ಯೆ ಮಾಡಲಾಗಿದೆ. ಮೂವರು ಉಗ್ರರು ಅಕ್ಟೋಬರ್‌ 7ರಂದು ಸಾವಿರಾರು ರಾಕೆಟ್‌ಗಳ ಮೂಲಕ ಇಸ್ರೇಲ್‌ ಮೇಲೆ ದಾಳಿ ನಡೆಸಲು ಪ್ರಮುಖ ಪಾತ್ರ ವಹಿಸಿದ್ದಾರೆʼ ಎಂದು ಐಡಿಎಫ್‌ ಪೋಸ್ಟ್‌ ಮಾಡಿದೆ.

ಹತ್ಯೆಗೀಡಾದ ಮೂವರು ಉಗ್ರರನ್ನು ಬೆಟಾಲಿಯನ್‌ ಕಮಾಂಡರ್‌ ರಿಫಾತ್‌ ಅಬ್ಬಾಸ್‌, ಬೆಟಾಲಿಯನ್‌ ಡೆಪ್ಯೂಟಿ ಕಮಾಂಡರ್‌ ಇಬ್ರಾಹಿಂ ಜಬ್ದಾ ಹಾಗೂ ಕೋಂಬಾಟ್‌ ಸಪೋರ್ಟ್‌ ಕಮಾಂಡರ್‌ ತಾರೆಕ್‌ ಮಾರೌಫ್‌ ಎಂದು ಗುರುತಿಸಲಾಗಿದೆ.

Ramya Bolantoor

Recent Posts

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

17 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

29 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

48 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

49 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

1 hour ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

1 hour ago