News Karnataka Kannada
Sunday, May 05 2024
ವಿದೇಶ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ರಸ್ತೆ ಅಪಘಾತ, 8 ಸಾವು

Uttar Pradesh: Three killed as truck rams into dhaba
Photo Credit :

ಕಾಬೂಲ್: ಅಫ್ಘಾನಿಸ್ತಾನದ ಉತ್ತರ ಬಾಗ್ಲಾನ್ ಪ್ರಾಂತ್ಯದಲ್ಲಿ ಶನಿವಾರ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಪ್ರಯಾಣಿಕರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ಪ್ರಾಂತೀಯ ರಾಜಧಾನಿ ಪುಲ್-ಇ-ಖುಮ್ರಿ ಹೊರಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್ ಗೆ ಕಾಬೂಲ್ ಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ 11 ಜನರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಸಂಚಾರ ಪೊಲೀಸ್ ಮುಖ್ಯಸ್ಥ ಖಾರಿ ನಜೀರುಲ್ಲಾ ಅಬಿದಿ ಅವರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

ಪ್ರಾಂತೀಯ ರಾಜಧಾನಿ ಪುಲ್-ಎ-ಖುರ್ಮಿಯಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಮಾರಣಾಂತಿಕ ರಸ್ತೆ ಅಪಘಾತಕ್ಕೆ ಪ್ರಯಾಣಿಕರ ಬಸ್ಸಿನ ಅಜಾಗರೂಕ ಚಾಲನೆಯೇ ಕಾರಣ ಎಂದು ದೂಷಿಸಿದ ಅಬಿದಿ, ಘಟನಾ ಸ್ಥಳದಿಂದ ತಪ್ಪಿಸಿಕೊಂಡ ಬಸ್ಸಿನ ಚಾಲಕನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು