News Karnataka Kannada
Thursday, May 02 2024
ವಿದೇಶ

ಕಾಬೂಲ್: ಮಸೀದಿ ಸ್ಫೋಟ, 21 ಜನರ ದುರ್ಮರಣ

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.
Photo Credit : Wikimedia

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯಲ್ಲಿರುವ ಮಸೀದಿಯಲ್ಲಿ  ಭಕ್ತರನ್ನು ಗುರಿಯಾಗಿಸಿಕೊಂಡು ನಡೆದ ಸ್ಫೋಟದಲ್ಲಿ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ 33 ಜನರು ಗಾಯಗೊಂಡಿದ್ದಾರೆ ಎಂದು ಕಾಬೂಲ್  ಪೊಲೀಸರು ಗುರುವಾರ ದೃಢಪಡಿಸಿದ್ದಾರೆ.

17 ರ  ಸಂಜೆಮಸೀದಿಯಲ್ಲಿ ಪ್ರಾರ್ಥನೆಯ ಸಮಯದಲ್ಲಿ ಈ ಸ್ಫೋಟ ಸಂಭವಿಸಿದ್ದು, 21 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆ” ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಸುದ್ದಿಗಾರರಿಗೆ ತಿಳಿಸಿದರು.

ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ ಹತ್ತಿರದ ಕಟ್ಟಡದ ಕಿಟಕಿ ಗಾಜುಗಳು ಸಹ ಒಡೆದು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಈ ಮಾರಣಾಂತಿಕ ಘಟನೆಯ ಹೊಣೆಯನ್ನು ಇದುವರೆಗೆ ಯಾರೂ ಹೊತ್ತುಕೊಂಡಿಲ್ಲ. ಕಾಬೂಲ್  ನಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಪ್ರಮುಖ ತಾಲಿಬಾನ್ ಪರ ಮೌಲ್ವಿಯೊಬ್ಬರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ಸ್ಫೋಟ ಸಂಭವಿಸಿದೆ.

ಈ ಹಿಂದಿನ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು