ಕಂಪಾಲಾ, ಸೆಪ್ಟೆಂಬರ್ 5: ಮಧ್ಯ ಉಗಾಂಡಾದ ವಾಕಿಸೊ ಜಿಲ್ಲೆಯಲ್ಲಿ ಕಲ್ಲು ಕ್ವಾರಿ ಕುಸಿದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಜ್ಜನ್ಸಿ ಟೌನ್ ಕೌನ್ಸಿಲ್ ನಮುಲಾಂಡಾ ನಗಂಜೊ ಸೆಲ್ ನ ಅವಶೇಷಗಳಿಂದ ಐದು ಶವಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಘಟನೆ ಶನಿವಾರ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಮೃತರಲ್ಲಿ ನಾಲ್ವರು ದಿನಗೂಲಿ ಕಾರ್ಮಿಕರಾಗಿದ್ದು, ಒಬ್ಬರು ಟ್ರಕ್ ಚಾಲಕರಾಗಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಘಟನೆಯ ಕಾರಣದ ಬಗ್ಗೆ ತನಿಖೆಗಳು ಇನ್ನೂ ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
“ಆದಾಗ್ಯೂ, ನಾವು ಸುತ್ತಮುತ್ತಲಿನ ಪ್ರದೇಶದ ಸಾರ್ವಜನಿಕರಿಗೆ ಕ್ವಾರಿಗೆ ಹೋಗುವುದನ್ನು ತಪ್ಪಿಸಲು ಸಲಹೆ ನೀಡುತ್ತೇವೆ,” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.
ಜೂನ್ 2021 ರಲ್ಲಿ ಉಗಾಂಡಾದ ರಾಜಧಾನಿ ಕಂಪಾಲಾದಲ್ಲಿ ಕಲ್ಲು ಕ್ವಾರಿ ಕುಸಿದು ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದರು.