Categories: ವಿದೇಶ

ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ: 100ಕ್ಕೂ ಅಧಿಕ ಮಂದಿ ಸಾವು

ಸಿರಿಯಾ: ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮಿಲಿಟರಿ ಸಮಾರಂಭದಿಂದ ಸಿರಿಯಾದ ರಕ್ಷಣಾ ಸಚಿವರು ನಿರ್ಗಮಿಸಿದ ಸ್ವಲ್ಪ ಸಮಯದ ನಂತರ, ಡ್ರೋನ್‌ಗಳಿಂದ ಬಾಂಬ್‌ಗಳ ಮಳೆ ಸುರಿಯಲಾರಂಭಿಸಿತು ಎಂದು ಹೇಳಲಾಗುತ್ತಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸಿರಿಯನ್ ಸೇನೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ.

ಯುದ್ಧ ಪೀಡಿತ ದೇಶದ ಕುರ್ದಿಶ್ ಹಿಡಿತದಲ್ಲಿರುವ ಈಶಾನ್ಯದಲ್ಲಿ ಟರ್ಕಿಯ ವಾಯು ದಾಳಿಗಳು ಕನಿಷ್ಠ ಒಂಬತ್ತು ಜನರನ್ನು ಕೊಂದಿವೆ ಎಂದು ಕುರ್ದಿಶ್ ಪಡೆಗಳು ತಿಳಿಸಿವೆ. ಅಂಕಾರಾ ಆತ್ಮಾಹುತಿ ಬಾಂಬ್ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸುವುದಾಗಿ ಈ ಮೊದಲೇ ಬೆದರಿಕೆ ಬಂದಿತ್ತು ಎನ್ನಲಾಗ್ತಿದೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago