ಮಾರುಕೇಶ್: ಮೊರಕಾಕೊದಲ್ಲಿ ಸಂಭವಿಸಿದ ಭೀಕರ ಭೂಕಂಪನದಲ್ಲಿ ಸಾವನಪ್ಪಿದವರ ಸಂಖ್ಯೆ 2800ಕ್ಕೇ ಏರಿದೆ. ಈ ದುರಂತದಲ್ಲಿ 2870 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾರುಕೇಶ್ ನೈಋತ್ಯದ ಅಲ್ ಹೌಜ್ ಪ್ರಾಂತ್ಯದಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಪ್ರಾಣ ಹಾನಿ ಉಂಟಾಗಿದೆ. ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ವಿವಿಧ ಪ್ರದೇಶಗಳಲ್ಲಿ ಅವಶೇಷಗಳಡಿ ಸಿಲುಕಿದವರನ್ನು ರಕ್ಷಣೆ, ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸ್ಪೇನ್ ಬ್ರಿಟನ್ ಕತಾರ್ ಹಾಗೂ ಯುಎಇನಿಂದ ಆಗಮಿಸಿದ ರಕ್ಷಣಾ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.