Categories: ವಿದೇಶ

ಮೊರಾಕೊ ಭೂಕಂಪನ: ಸಾವನ್ನಪ್ಪಿದವರ ಸಂಖ್ಯೆ 632ಕ್ಕೆ ಏರಿಕೆ

ರಬತ್: ಮಧ್ಯ ಮೊರಾಕೊದಲ್ಲಿ ಸಂಭವಿಸಿದ 6.8 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 632 ಕ್ಕೆ ಏರಿದೆ, 329 ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಟಿವಿ ಚಾನೆಲ್‌ ವರದಿ ಮಾಡಿದೆ.

ಅಲ್-ಹೌಜ್, ಮರ್ರಾಕೇಶ್, ಔರ್ಜಾಜೆಟ್, ಅಜಿಲಾಲ್, ಚಿಚೌವಾ ಮತ್ತು ತಾರೌಡಾಂಟ್ ಪ್ರಾಂತ್ಯಗಳು ಮತ್ತು ಪುರಸಭೆಗಳಲ್ಲಿ ಸಾವುನೋವುಗಳು ವರದಿಯಾಗಿವೆ ಎಂದು ಮೊರಾಕೊದ ಆಂತರಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದುವು ಹೈ ಅಟ್ಲಾಸ್ ಪರ್ವತಗಳಲ್ಲಿ, ಮರ್ರಾಕೇಶ್‌ನಿಂದ ನೈರುತ್ಯಕ್ಕೆ 71 ಕಿಮೀ ದೂರದಲ್ಲಿ 18.5 ಕಿಮೀ ಆಳದಲ್ಲಿತ್ತು ಎಂದು ಬಿಬಿಸಿ ವರದಿ ಮಾಡಿದೆ.

ರಾತ್ರಿ 11.11ಕ್ಕೆ ಭೂಕಂಪ ಸಂಭವಿಸಿದೆ. ಈ ವೇಳೆ ಜನರು ರಸ್ತೆಗಳಲ್ಲಿ ಓಡುತ್ತಿರುವ ವಿಡಿಯೋಗಳು ಜಾಲತಾಣಗಳಲ್ಲಿ ಹರಿದಾಡಿದೆ. ಭೂಕಂಪದ ಕೇಂದ್ರದಿಂದ ಸುಮಾರು 350 ಕಿಮೀ ದೂರದಲ್ಲಿರುವ ರಾಜಧಾನಿ ರಬಾತ್‌ನಲ್ಲಿ ಮತ್ತು ಕಾಸಾಬ್ಲಾಂಕಾ ಮತ್ತು ಎಸ್ಸೌಯಿರಾ ನಗರಗಳಲ್ಲಿಯೂ ಸಹ ಕಂಪನಗಳು ಸಂಭವಿಸಿವೆ ಎಂದು ವರದಿಯಾಗಿದೆ.

Ashika S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

55 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago