News Karnataka Kannada
Monday, April 29 2024
ವಿದೇಶ

ನಾಗಾಲ್ಯಾಂಡ್‌: ಒಂದೇ ಕುಟುಂಬದ ಐವರು ಸಜೀವ ದಹನ

ತಾಲೂಕಿನ ಹಾರೋಬೆಳವಡಿ ಗ್ರಾಮದ ರೈತ ಸಂಗಪ್ಪ ಕಡಲೆ ಎಂಬುವವರಿಗೆ ಸೇರಿದ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗಲು ಅಂದಾಜು 70 ಸಾವಿರ ಮೌಲ್ಯದ ಮೇವು ಸುಟ್ಟ ಕರಕಲಾಗಿದೆ.
Photo Credit : News Kannada

ದಿಮಾಪುರ: ನಾಗಾಲ್ಯಾಂಡ್‌ ನಲ್ಲಿ ಘೋರ ದುರಂತವೊಂದು ನಡೆದು ಹೋಗಿದೆ. ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ 10.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ನಾಗ ಸಮುದಾಯವಲ್ಲದ ಜನರು ವಾಸಿಸುವ ಹುಲ್ಲಿನ ಮನೆಗಳ ಸಾಲುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.

ದೀಪಾವಳಿ ಆಚರಣೆ ವೇಳೆ ಪಟಾಕಿ ಸಿಡಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಬೆಂಕಿಯಿಂದಾಗಿ ಸುಮಾರು 50 ಕುಟುಂಬಗಳು ತೊಂದರೆಗೀಡಾಗಿವೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು