ನ್ಯೂಯಾರ್ಕ್: ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನವಾಗಿದೆ. ಟ್ರಂಪ್ ವಿರುದ್ಧ ಕೇಳಿಬಂದ ಆರೋಪ ತನಿಖೆ ನಡೆಸಲು ಸೂಕ್ತವಾಗಿದೆ ಎಂದು ಇತ್ತೀಚೆಗೆ ಗ್ರ್ಯಾಂಡ್ ಜ್ಯೂರಿ ಶಿಫಾರಸು ಮಾಡಿದ್ದ ಹಿನ್ನೆಲೆಯಲ್ಲಿ ಭಾರೀ ಬಿಗಿಭದ್ರತೆಯೊಂದಿಗೆ ಟ್ರಂಪ್ ಮಂಗಳವಾರ ನ್ಯೂಯಾರ್ಕ್ನ ಮ್ಯಾನ್ಹ್ಯಾಟನ್ ನ್ಯಾಯಾಲಯಕ್ಕೆ ಹಾಜರಾದರು.
ಈ ವೇಳೆ ಅವರನ್ನು ಬಂಧಿಸಿದ ಪೊಲೀಸರು ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು,. ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದೂ ಸೇರಿದಂತೆ ಹಣ ವಂಚನೆಯ 30ಕ್ಕೂ ಹೆಚ್ಚು ದೋಷಾರೋಪಗಳನ್ನು ಹೊರಿಸಿತು. ಈ ವೇಳೆ ಟ್ರಂಪ್ ನಾನು ತಪ್ಪು ಮಾಡಿಲ್ಲ. 32 ಆರೋಪಗಳಲ್ಲಿ ನಾನು ನಿರಪರಾಧಿ ಎಂದಿದ್ದಾರೆ.
ಚಲನಚಿತ್ರ ನಟಿ ಸ್ಟಾರ್ಮಿ ಡೇನಿಯಲ್ಸ್ ಅವರಿಗೆ 2016 ರ ಅಧ್ಯಕ್ಷೀಯ ಚುನಾವಣೆಯ ಮೊದಲು ಟ್ರಂಪ್ ಹಣ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಿರಪರಾಧಿ ಎಂದಿರುವ ಟ್ರಂಪ್, ಈ ಪ್ರಕರಣ ರಾಜಕೀಯ ದ್ವೇಷದಿಂದ ಮಾಡಲಾಗಿದ್ದು ಎಂದು ಆರೋಪಿಸಿದ್ದಾರೆ.
ದಶಕಗಳ ಹಿಂದೆ ಗಾಲ್ಫ್ ಪಂದ್ಯಾವಳಿ ಆಡಲು ತೆರಳಿದ್ದ ವೇಳೆ ನೀಲಿ ಚಿತ್ರಗಳ ನಟಿ ಸ್ಟಾರ್ಮಿ ಜೊತೆ ಟ್ರಂಪ್ ಲೈಂಗಿಕ ಸಂಪರ್ಕ ಬೆಳೆಸಿದ್ದರು. 2011ರಲ್ಲಿ ಸ್ಟಾರ್ಮಿ ಈ ವಿಷಯದ ಕುರಿತು ಬೆಳಕು ಚೆಲ್ಲಿದ್ದರು. ಈ ನಡುವೆ 2016ರಲ್ಲಿ ಟ್ರಂಪ್ ಚುನಾವಣಾ ಕಣಕ್ಕೆ ಇಳಿದ ವೇಳೆ, ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು. ಈ ವಿಷಯ ಬೆಳಕಿಗೆ ಬಂದು ಪ್ರಕರಣ ದಾಖಲಾಗಿತ್ತು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…