ಹನೋಯಿ: ವಿಯೆಟ್ನಾಂನ ಉತ್ತರ ಮತ್ತು ಮಧ್ಯ ಪ್ರದೇಶಗಳಲ್ಲಿ ಸೆಪ್ಟೆಂಬರ್ 26 ರಿಂದ ಸೆಪ್ಟೆಂಬರ್ 28 ರವರೆಗೆ ಸಂಭವಿಸಿದ ಪ್ರವಾಹದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ, ಒಬ್ಬರು ನಾಪತ್ತೆಯಾಗಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ ಎಂದು ನೈಸರ್ಗಿಕ ವಿಕೋಪ ತಡೆ ಸಮಿತಿ ತಿಳಿಸಿದೆ.
ಭಾರೀ ಮಳೆಯಿಂದ ಉಂಟಾದ ಪ್ರವಾಹವು ಮನೆಗಳು, ರಸ್ತೆಗಳು, ಭತ್ತ ಮತ್ತು ಇತರ ಬೆಳೆಗಳನ್ನು ಹಾನಿಗೊಳಿಸಿದೆ. ಕೋಳಿ ಫಾರ್ಮ್ ಗಳು ಮತ್ತು ಜಾನುವಾರು ಶೆಡ್ ಗಳಿಗೆ ಹಾನಿಯಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮುಖ್ಯವಾಗಿ ಪ್ರವಾಹಗಳು ಮತ್ತು ಭೂಕುಸಿತದಿಂದ ಈ ವರ್ಷ ವಿಯೆಟ್ನಾಂನಲ್ಲಿ 98 ಜನರು ಸಾವನ್ನಪ್ಪಿದ್ದಾರೆ ಎಂದು ಅಂಕಿ ಅಂಶಗಳು ಹೇಳಿವೆ.