ಜೆಡ್ಡಾ: ಗಾಜಾ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ, ಒಐಸಿಯ ತುರ್ತು ಸಭೆ ಕರೆದಿದೆ. 57 ಇಸ್ಲಾಮಿಕ್ ರಾಷ್ಟ್ರಗಳ ಸಂಘಟನೆಯಾದ ಒಐಸಿ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದೆ.
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ಗೆ ಎಚ್ಚರಿಕೆ ನೀಡಿದ್ದಾರೆ. ಗಾಜಾದ ಮೇಲೆ ಇಸ್ರೇಲ್ ತನ್ನ ದಾಳಿಯನ್ನು ಹೀಗೆ ಮುಂದುವರೆಸಿದರೆ, ಪ್ರಪಂಚದ ಮುಸ್ಲಿಮರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಗಾಜಾದ ಮೇಲೆ ಬಾಂಬ್ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.