Categories: ವಿದೇಶ

ಬಾಂಗ್ಲಾದೇಶ: ಇಂಧನ ಬೆಲೆಯನ್ನು ಶೇ 51.7 ಹೆಚ್ಚಿಸಿದ ಬೆನ್ನಲ್ಲೇ ಹಲವಡೆ ಪ್ರತಿಭಟನೆ

ಬಾಂಗ್ಲಾದೇಶ:  ಇಂಧನ ಬೆಲೆಯನ್ನು ಶೇ 51.7 ಹೆಚ್ಚಿಸಿದ ಬೆನ್ನಲ್ಲೇ ಹಲವಡೆ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದೆ.
ಸರ್ಕಾರದ ನಿಲುವು ವಿರೋಧಿಸಿ ಜನರು ರಸ್ತೆಗಿಳಿದು ಭಾರಿ ಪ್ರತಿಭಟನೆ ನಡೆಸಿದ್ದು, ಹಲವೆಡೆ ಹಿಂಸಾಚಾರ ನಡೆದಿದೆ.

ಪೊಲೀಸರ ಬಿಗಿ ಬಂದೋಬಸ್ತ್ ನಡುವೆಯೂ ಸಾರ್ವಜನಿಕರು ದಂಗೆ ಎದ್ದಿದ್ದಾರೆ. ಈಗಾಗಲೇ ಅಧಿಕ ಹಣದುಬ್ಬರ ಎದುರಿಸುತ್ತಿರುವ ದೇಶದ ಜನರಿಗೆ ಇಂಧನ ಬೆಲೆ ಏರಿಕೆ ಮತ್ತಷ್ಟು ಹೊರೆಯಾಗಿದೆ.

ನವೀಕರಿಸಿದ ಬೆಲೆಗಳು ಎಲ್ಲರಿಗೂ ಸಹಿಸಲು ಸಾಧ್ಯವಿಲ್ಲ. ಆದರೆ ನಮಗೆ ಬೇರೆ ಆಯ್ಕೆ ಇರಲಿಲ್ಲ. ಜನರು ತಾಳ್ಮೆಯಿಂದಿರಬೇಕು ಎಂದು ವಿದ್ಯುತ್, ಇಂಧನ ಮತ್ತು ಖನಿಜ ಸಂಪನ್ಮೂಲಗಳ ರಾಜ್ಯ ಸಚಿವ ನಸ್ರುಲ್ ಹಮೀದ್ ಸುದ್ದಿಗಾರರಿಗೆ ತಿಳಿಸಿದರು. ಜಗತಿಕ ಬೆಲೆಗಳು ಕುಸಿದರೆ ಬೆಲೆಗಳನ್ನು ಸರಿಹೊಂದಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ನಡುವೆ ಬಾಂಗ್ಲಾದೇಶ ಮತ್ತು ಚೀನಾ ನಡುವೆ ವಿಪತ್ತು ನಿರ್ವಹಣೆ ಮತ್ತು ಸಾಂಸ್ಕೃತಿಕ ಸಹಕಾರ ಸೇರಿದಂತೆ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಚೀನಾದ ವಿದೇಶಾಂಗ ಸಚಿವರು ಬಾಂಗ್ಲಾದೇಶಕ್ಕೆ ಆಗಮಿಸಿದ್ದು, ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾಗಿದ್ದಾರೆ.

Sneha Gowda

Recent Posts

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

13 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

46 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

60 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago