ವಿದೇಶ

ರಿಯಾದ್: ಆರ್ಥಿಕ ಸಹಕಾರ ಹೆಚ್ಚಿಸಲು ಸೌದಿ ಅರೇಬಿಯಾ, ಇರಾಕ್ ನಡುವೆ ವಿದ್ಯುತ್ ಗ್ರಿಡ್ ಒಪ್ಪಂದ

ರಿಯಾದ್: ಸೌದಿ ಅರೇಬಿಯಾ ಮತ್ತು ಇರಾಕ್ ದೇಶಗಳು ಆರ್ಥಿಕ ಸಹಕಾರವನ್ನು ಹೆಚ್ಚಿಸಲು ವಿದ್ಯುತ್ ಚಾಲಿತ ಗ್ರಿಡ್ ಗಳ ಒಪ್ಪಂದಕ್ಕೆ ಸಹಿ ಹಾಕಿವೆ.

ಸೌದಿ ಇಂಧನ ಸಚಿವ ಪ್ರಿನ್ಸ್ ಅಬ್ದುಲ್ ಅಜೀಜ್ ಬಿನ್ ಸಲ್ಮಾನ್ ಅಲ್ ಸೌದ್ ಮತ್ತು ಇರಾಕ್ ತೈಲ ಸಚಿವ ಇಹ್ಸಾನ್ ಅಬ್ದುಲ್ ಜಬ್ಬಾರ್ ನಡುವೆ  ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ದ್ವಿಪಕ್ಷೀಯ ಆರ್ಥಿಕ ಸಂಬಂಧಗಳನ್ನು ಹೆಚ್ಚಿಸುವುದರ ಜೊತೆಗೆ, ಒಪ್ಪಂದಕ್ಕೆ ಸಹಿ ಹಾಕುವುದರಿಂದ ಸೌದಿ ಅರೇಬಿಯಾವನ್ನು ವಿದ್ಯುತ್ ಶಕ್ತಿ ಗ್ರಿಡ್ ಗಳ ಪ್ರಾದೇಶಿಕ ಕೇಂದ್ರವಾಗಿ ಸ್ಥಾಪಿಸಲು ಮತ್ತು ದೇಶದ ವಿದ್ಯುತ್ ಉತ್ಪಾದನಾ ಯೋಜನೆಗಳಲ್ಲಿ ಹೂಡಿಕೆಯನ್ನು ಆಕರ್ಷಿಸಲು ಸಹಾಯ ಮಾಡುತ್ತದೆ ಎಂದು ಅಬ್ದುಲ್ ಅಜೀಜ್ ಹೇಳಿದರು.

ಕೊಲ್ಲಿ ಸಹಕಾರ ಮಂಡಳಿಯ ಸದಸ್ಯ ರಾಷ್ಟ್ರಗಳ ನಾಯಕರು ಮತ್ತು ಜೋರ್ಡಾನ್, ಈಜಿಪ್ಟ್ ಮತ್ತು ಇರಾಕ್ ನಾಯಕರು ಭಾಗವಹಿಸುವ ಶನಿವಾರದ ಜೆಡ್ಡಾ ಶೃಂಗಸಭೆಗೆ ಮುಂಚಿತವಾಗಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

Ashika S

Recent Posts

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

2 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

3 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

14 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

15 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

33 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

44 mins ago