News Karnataka Kannada
Sunday, May 05 2024
ವಿದೇಶ

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 17 ಮಂದಿ ಸಾವು

Ukraine war
Photo Credit : News Kannada

ಉಕ್ರೇನ್: ಉಕ್ರೇನ್​ನನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಬೇಕು ಎಂದು ರಷ್ಯಾ ಹೊಂಚು ಹಾಕಿ ಕುಳಿತಿದೆ. ಹಾಗಾಗಿ ಆಗಾಗ ದಾಳಿ ನಡೆಸುತ್ತಲೇ ಇದೆ. ಪೂರ್ವ ಉಕ್ರೇನ್​ನ ಕೋಸ್ಟಿಯಾಂಟಿನಿವ್ಕಾ ನಗರದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆದಿದೆ, ಘಟನೆಯಲ್ಲಿ 17 ಮಂದಿ ಪ್ರಾಣಕಳೆದುಕೊಂಡಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಸಲಹೆಗಾರ ಮೈಖೈಲೊ ಪೊಡೊಲ್ಯಾಕ್ ಈ ಮಾಹಿತಿಯನ್ನು ನೀಡಿದ್ದಾರೆ.

ಕೊಸ್ಟಿಯಾಂಟಿನಿವ್ಕಾ ನಗರದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಉಕ್ರೇನ್‌ನ ಕೋಸ್ಟಿಯಾಂಟಿನಿವ್ಕಾ ನಗರವು ಯುದ್ಧಭೂಮಿಗೆ ಬಹಳ ಹತ್ತಿರದಲ್ಲಿದೆ. ಪ್ರಾಣ ಕಳೆದುಕೊಂಡವರಲ್ಲಿ ಮಕ್ಕಳು ಸೇರಿದ್ದಾರೆ. ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ದಾಳಿಯನ್ನು ಖಂಡಿಸಿದ್ದಾರೆ. ಈ ದಾಳಿಯಲ್ಲಿ 17 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಅಮೆರಿಕದ ವಿದೇಶಾಂಗ ಸಚಿವ ಆಂಟೋನಿ ಬ್ಲಿಂಕೆನ್ ಕೀವ್‌ಗೆ ತಲುಪಿರುವ ಸಮಯದಲ್ಲಿ ರಷ್ಯಾ ಈ ದಾಳಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು