ಮಾಸ್ಕೊ: ಬಂಧನ ಭೀತಿಯಿಂದಾಗಿ ಸೆಪ್ಟೆಂಬರ್ ಮೊದಲ ವಾರದಲ್ಲಿ ದಿಲ್ಲಿಯಲ್ಲಿ ಜರುಗುವ ಜಿ20 ಶೃಂಗಸಭೆಗೆ ಆಗಮಿಸುವುದಕ್ಕೆ ಹಿಂದೇಟು ಹಾಕುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲಿ ಚೀನಾ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ನಲ್ಲಿ ಪುಟಿನ್ ಚೀನಾಗೆ ಭೇಟಿ ನೀಡಿ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿಯಾಗಲಿದ್ದಾರೆ. ಉಭಯ ನಾಯಕರು ಪ್ರಸ್ತುತ ಜಾಗತಿಕ ಸ್ಥಿತಿಗತಿ, ಏಷ್ಯಾದಲ್ಲಿ ವ್ಯವಹಾರ ನೀತಿಗಳ ಪರಿಷ್ಕರಣೆ ಸೇರಿದಂತೆ ಅನೇಕ ಗಂಭೀರ ವಿಚಾರಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಪುಟಿನ್ ಜತೆಗೆ ರಷ್ಯಾ ವಿದೇಶಾಂಗ ಸಚಿವ ಸರ್ಜಿ ಲಾವ್ರೊವ್ ಕೂಡ ಚೀನಾಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.