News Karnataka Kannada
Monday, May 06 2024
ವಿದೇಶ

ಸ್ಯಾನ್ ಫ್ರಾನ್ಸಿಸ್ಕೊ: ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಗೂಗಲ್ ಸಿಇಒ ಸುಂದರ್ ಪಿಚೈ

Sundar
Photo Credit : IANS

ಸ್ಯಾನ್ ಫ್ರಾನ್ಸಿಸ್ಕೊ: ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ಶುಕ್ರವಾರ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ತಮ್ಮ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರಿಂದ ಸ್ವೀಕರಿಸಿದರು.

ಭಾರತೀಯ-ಅಮೆರಿಕನ್ ಪಿಚೈ ಅವರಿಗೆ ವ್ಯಾಪಾರ ಮತ್ತು ಕೈಗಾರಿಕೆ ವಿಭಾಗದಲ್ಲಿ 2022ರ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಮಧುರೈ ಮೂಲದ ಪಿಚೈ ಅವರು ಈ ವರ್ಷದ 17 ಮಂದಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಲ್ಲಿ ಒಬ್ಬರು.

‘ನನ್ನ ಆಸಕ್ತಿ ಆಧಾರದ ಮೇಲೆ ಮುಂದುವರಿಯಲು ಅವಕಾಶ ಮಾಡಿಕೊಡಲು ನನ್ನ ಕುಟುಂಬ ಬಹಳಷ್ಟು ತ್ಯಾಗ ಮಾಡಿದೆ’ಎಂದು ಪಿಚೈ ಹೇಳಿದರು.

ಈ ಸಂದರ್ಭದಲ್ಲಿ ಸ್ಯಾನ್ ಫ್ರಾನ್ಸಿಸ್ಕೋದ ಭಾರತದ ಕಾನ್ಸುಲ್ ಜನರಲ್ ಟಿ ವಿ ನಾಗೇಂದ್ರ ಪ್ರಸಾದ್ ಕೂಡ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು