News Karnataka Kannada
Monday, April 29 2024
ವಿದೇಶ

ಸ್ಯಾನ್ ಫ್ರಾನ್ಸಿಸ್ಕೋ: ಕ್ಯಾಲಿಫೋರ್ನಿಯಾ ಶಾಲೆಯಲ್ಲಿ ಶೂಟೌಟ್, ಆರು ಮಂದಿಗೆ ಗಾಯ

ಅಮೆರಿಕದ ಫ್ಯಾಮಿಲಿ ಟುಗೆದರ್ ಕಾರ್ಯಕ್ರಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು 11 ಮಕ್ಕಳ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
Photo Credit : Freepik

ಸ್ಯಾನ್ ಫ್ರಾನ್ಸಿಸ್ಕೋ: ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ನಗರದ ಸರ್ಕಾರಿ ಶಾಲೆಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಮಧ್ಯಾಹ್ನ 12.45 ಕ್ಕೆ ರುಡ್ಸ್ಡೇಲ್ ನ್ಯೂಕಮರ್ ಹೈಸ್ಕೂಲ್ನಲ್ಲಿ ಈ ಗುಂಡಿನ ದಾಳಿ ನಡೆದಿದೆ ಎಂದು ಮಾಧ್ಯಮಗಳು ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇಬ್ಬರು ವಿದ್ಯಾರ್ಥಿಗಳು, ಒಬ್ಬ ಆಪ್ತಸಮಾಲೋಚಕ, ಒಬ್ಬ ಸೆಕ್ಯೂರಿಟಿ ಗಾರ್ಡ್ ಮತ್ತು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.

ನಿರ್ದಿಷ್ಟ ಜನರನ್ನು ಗುರಿಯಾಗಿಸಲು ಬಂದೂಕುಧಾರಿಗಳು ಶಾಲಾ ಕಟ್ಟಡವನ್ನು ಪ್ರವೇಶಿಸಿದರು ಮತ್ತು ವಾಹನದಲ್ಲಿ ಪಲಾಯನ ಮಾಡುವ ಮೊದಲು 30 ಕ್ಕೂ ಹೆಚ್ಚು ಸುತ್ತು ಗುಂಡು ಹಾರಿಸಿದರು.

ಗುರುವಾರ ಮಧ್ಯಾಹ್ನದ ವೇಳೆಗೆ, ಗಾಯಗೊಂಡವರಲ್ಲಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋ ಕ್ರಾನಿಕಲ್ ವರದಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು