ಮಾಸ್ಕೊ: ವೈಜ್ಞಾನಿಕ ಮತ್ತು ತಾಂತ್ರಿಕ ಅಭಿವೃದ್ಧಿ ಸಂಬಂಧಿಸಿದಂತೆ ದೇಶದ ಪ್ರಸ್ತುತ ಕಾರ್ಯತಂತ್ರವನ್ನು ಪರಿಷ್ಕರಿಸುವುದು ಅಗತ್ಯವಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
“ನಾವು ನಮ್ಮ ಮಾನವ, ಹಣಕಾಸು ಮತ್ತು ಮೂಲಸೌಕರ್ಯ ಸಂಪನ್ಮೂಲಗಳನ್ನುಆದ್ಯತೆಗಳ ಮೇಲೆ ಕೇಂದ್ರೀಕರಿಸಬೇಕಿದೆ” ಎಂದು ಬುಧವಾರ ಕ್ರೆಮ್ಲಿನ್ ವಿಜ್ಞಾನ ಮತ್ತು ಶಿಕ್ಷಣ ಮಂಡಳಿಯ ಸಭೆಯಲ್ಲಿ ತಿಳಿಸಿದರು.
ಈ ನಿಟ್ಟಿನಲ್ಲಿ, ರಾಷ್ಟ್ರೀಯ ವೈಜ್ಞಾನಿಕ ಮತ್ತು ತಾಂತ್ರಿಕ ಅಭಿವೃದ್ಧಿ ಕಾರ್ಯತಂತ್ರದ ದಾಖಲೆಗೆ ಕೆಲವು ತಿದ್ದುಪಡಿಗಳನ್ನು ಮಾಡುವ ಅಗತ್ಯವಿದೆ ಎಂದು ಸಭೆಯಲ್ಲಿ ವಿವರಿಸಿದ್ದಾರೆ. ಬಾಹ್ಯ ಒತ್ತಡಗಳು ಹೆಚ್ಚಿರುವ ಪ್ರಸ್ತುತ ದಿನಗಳಲ್ಲಿ ರಾಷ್ಟ್ರೀಯ ಹಿತಾಸಕ್ತಿ ವಿಷಯಗಳ ಬಗ್ಗೆ ಆದ್ಯ ಗಮನ ನೀಡುವುದು ಅಗತ್ಯ. ಈ ನಿಟ್ಟಿನಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ಕ್ಷೇತ್ರದ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು