News Karnataka Kannada
Sunday, April 28 2024
ವಿದೇಶ

ದಕ್ಷಿಣ ಆಫ್ರಿಕಾ: ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ಮಂದಿ ಸಾವು

Shoot Fire
Photo Credit :

ದಕ್ಷಿಣ ಆಫ್ರಿಕಾ: ಶನಿವಾರ ಮಧ್ಯರಾತ್ರಿ ಬಳಿಕ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ಮಂದಿ ಸಾವನ್ನಪ್ಪಿದ್ದು, 11 ಜನ ಹಾಯಗೊಂಡಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ 12 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ.  ಗಾಯಗೊಂಡ 11 ಮಂದಿಯನ್ನು ಚಿಕಿತ್ಸೆಗಾಗಿ ಕ್ರಿಸ್ ಹನಿ ಬರಗವಾನಾಥ್ ಆಸ್ಪತ್ರೆಗೆ ರವಾನಿಸಲಾಗಿದೆ.

ಭಾನುವಾರ ಬೆಳಗಿನ ಜಾವ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಪತ್ತೆ  ಮಾಡಿದ್ದಾರೆ. ಗುಂಡಿನ ದಾಳಿಗೆ ಕಾರಣವಾದ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ.

ಶನಿವಾರ ತಡರಾತ್ರಿ ಮಿನಿ ಬಸ್ನಲ್ಲಿ ಬಂದ ಕೆಲವರು ಬಾರ್‌ನಲ್ಲಿದ್ದವರ ಮೇಲೆ ಗುಂಡು ಹಾರಿಸಿರುವುದಾಗಿ ಪೊಲೀಸರು ಕಂಡುಕೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಬಾರ್‌ ಮೇಲೆ ಗುಂಡಿನ ದಾಳಿ ನಡೆದಿದ್ದು, ಇದರಿಂದ ತಪ್ಪಿಸಿಕೊಳ್ಳಲು ಯತ್ನಸಿದವರ ಮೇಲೆಯೂ ದುಷ್ಕರ್ಮಿಗಳು ಗುಂಡು ಹಾರಿಸಿರಬಹುದೆಂದು ಶಂಕಿಸಲಾಗಿದೆ.

ಈಸ್ಟ್ ಲಂಡನ್ ನಗರದ ಬಾರ್‌ನಲ್ಲಿ 21 ಯುವಕರು ಸಾವನ್ನಪ್ಪಿದ ಎರಡು ವಾರಗಳ ಬಳಿಕ ಸೊವೆಟೊ ಬಾರ್ ಶೂಟಿಂಗ್ ಬಗ್ಗೆ ಜನ ಭಯಭೀತರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು