ಲಾಹೋರ್: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾ ಪ್ರಾಂತದ ಡೇರಾ ಇಸ್ಮಾಯಿಲ್ ಖಾನ್ ನಗರದ ಅಫ್ಘಾನಿಸ್ತಾನದ ಗಡಿ ಬಳಿ ಗುಂಡಿನ ದಾಳಿ ಶುಕ್ರವಾರ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಭದ್ರತಾ ಪಡೆಯ ಪ್ರತಿದಾಳಿಯಲ್ಲಿ ಮೂವರು ಭಯೋತ್ಪಾದಕರು ಮೃತಪಟ್ಟಿದ್ದಾರೆ.
ಅನ್ಸಾರುಲ್ ಇಸ್ಲಾಮ್ ಎಂಬ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆ ವಹಿಸಿಕೊಂಡಿದ್ದು ಇದು ತಮ್ಮ ಪ್ರಥಮ ದಾಳಿಯಾಗಿದ್ದು ಮುಂದಿನ ದಿನಗಳಲ್ಲಿ ಇದೇ ರೀತಿಯಲ್ಲಿ ಇನ್ನಷ್ಟು ದಾಳಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದೆಎಂದು ತಿಳಿದು ಬಂದಿದೆ.