ವಿದೇಶ

ಅಮೆರಿಕದಲ್ಲಿ ಐಷಾರಾಮಿ ಬಂಗಲೆಯಲ್ಲಿ ಮೂವರು ಭಾರತೀಯರ ಶವಪತ್ತೆ

ನ್ಯೂಯಾರ್ಕ್: ನಿನ್ನೆಯಷ್ಟೆ ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ದೊರೆತಿದ್ದು ಬಹುದೊಡ್ಡ ಸುದ್ದಿಯಾಗಿತ್ತು. ಇದೀಗ ದೂರದ ಅಮೆರಿಕದ ಮ್ಯಾಸಚೂಸೆಟ್ಸ್‌ನಲ್ಲಿರುವ ತಮ್ಮ ಐಷಾರಾಮಿ ಮನೆಯಲ್ಲಿ ಭಾರತೀಯ ಮೂಲದ ದಂಪತಿಗಳು ಮತ್ತು ಅವರ ಹದಿಹರೆಯದ ಮಗಳು ಶವವಾಗಿ ಪತ್ತೆಯಾಗಿದ್ದಾರೆ.

ರಾಕೇಶ್ ಕಮಲ್ (57), ಅವರ ಪತ್ನಿ ಟೀನಾ (54) ಮತ್ತು ಅವರ ಮಗಳು ಅರಿಯಾನಾ (18) ಅವರ ಶವಗಳು ಡೋವರ್‌ನಲ್ಲಿರುವ ಅವರ ನಿವಾಸದಲ್ಲಿ ರಾತ್ರಿ 7.30 ರ ಸುಮಾರಿಗೆ ಪತ್ತೆಯಾಗಿವೆ ಎಂದು ನಾರ್ಫೋಕ್ ಜಿಲ್ಲಾ ಅಟಾರ್ನಿ (ಡಿಎ) ಮೈಕೆಲ್ ಮೊರಿಸ್ಸೆ ತಿಳಿಸಿದ್ದಾರೆ. ಡೋವರ್ ಮ್ಯಾಸಚೂಸೆಟ್ಸ್‌ನ ರಾಜಧಾನಿ ಬೋಸ್ಟನ್‌ನಿಂದ ನೈಋತ್ಯಕ್ಕೆ 32 ಕಿಲೋಮೀಟರ್ ದೂರದಲ್ಲಿದೆ.

ಟೀನಾ ಮತ್ತು ಅವರ ಪತಿ ಮೊದಲು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಡುನೋವಾ ಎಂಬ ಕಂಪನಿಯನ್ನು ನಡೆಸುತ್ತಿದ್ದರು ಅದನ್ನು ನಂತರ ಮುಚ್ಚಲಾಯಿತು ಎನ್ನಲಾಗಿದ್ದು. ಈ ಘಟನೆಯನ್ನು ‘ಕೌಟುಂಬಿಕ ಹಿಂಸಾಚಾರ’ ಎಂದು ಬಣ್ಣಿಸಿದ ಜಿಲ್ಲಾಧಿಕಾರಿ, ಕಮಲ್ ಶವದ ಬಳಿ ಬಂದೂಕು ಪತ್ತೆಯಾಗಿದೆ. ನ್ಯೂಯಾರ್ಕ್ ಪೋಸ್ಟ್ ವರದಿಯ ಪ್ರಕಾರ, ಮೂವರು ಕುಟುಂಬ ಸದಸ್ಯರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ವರದಿ ಮಾಡಿದೆ. ಆದರೆ ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬುದರ ಕುರಿತು ಪ್ರತಿಕ್ರಿಯಿಸುವ ಮೊದಲು ವೈದ್ಯಕೀಯ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ ಈ ನಡುವೆ ದಂಪತಿಗಳು ಇತ್ತೀಚಿನ ವರ್ಷಗಳಲ್ಲಿ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.

Gayathri SG

Recent Posts

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

5 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

42 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

60 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago