Categories: ವಿದೇಶ

ಟೋಕಿಯೊ: ನಿಷ್ಕ್ರಿಯ ಅಣು ಸ್ಥಾವರದಲ್ಲಿ ಬೆಂಕಿ

ಟೋಕಿಯೊ: ಜಪಾನ್‌ನ ನಿಗಾಟಾ ಪ್ರಾಂತ್ಯದಲ್ಲಿ ನಿಷ್ಕ್ರಿಯವಾಗಿರುವ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅದನ್ನು ನಂದಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಜಪಾನ್ ಸಮುದ್ರದ ಕರಾವಳಿಯಲ್ಲಿರುವ ಕಾಶಿವಾಝಕಿ-ಕರಿವಾ ಸ್ಥಾವರದ ನಂ. 5 ರಿಯಾಕ್ಟರ್ ಕಟ್ಟಡದಲ್ಲಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪ್ರಸ್ತುತ ಬೆಂಕಿಯನ್ನು ನಂದಿಸಲಾಗಿದ್ದು, ಯಾವುದೇ ಸಾವು ನೋವು ವರದಿಯಾಗಿಲ್ಲ. ಸ್ಥಾವರದ ಏಳು ರಿಯಾಕ್ಟರ್‌ಗಳು ಪ್ರಸ್ತುತ ಕಾರ್ಯಾಚರಣೆಯಲ್ಲಿ ಇಲ್ಲ. ಅಲ್ಲದೇ ವಿಕಿರಣ ಮಟ್ಟ ಬದಲಾಗಿಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಮಂಗಳವಾರದ ಬೆಂಕಿಯ ಕಾರಣದ ಬಗ್ಗೆ ಸ್ಥಳೀಯ ಟೆಪ್ಕೊ ಸಂಸ್ಥೆ ತನಿಖೆ ನಡೆಸುತ್ತಿದೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago