News Karnataka Kannada
Friday, May 03 2024
ವಿದೇಶ

ಟೋಕಿಯೋ: ಜಪಾನ್ ನ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ದುರಂತ, ನಾಲ್ವರು ಸಾವು

Miscreants pour petrol on young man for his love affair
Photo Credit :

ಟೋಕಿಯೋ: ಜಪಾನ್ ನ ಕೋಬೆ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಥಳೀಯ ಕಾಲಮಾನ ಮುಂಜಾನೆ 1.35 ರ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಬಂದಿದ್ದು, ಕೋಬೆಯ ಹ್ಯೋಗೊ ವಾರ್ಡ್ನಲ್ಲಿರುವ ಮೂರು ಅಂತಸ್ತಿನ ವಸತಿ ಸಂಕೀರ್ಣದ ಮೊದಲ ಮಹಡಿಯ ಕಿಟಕಿಯಿಂದ ಕಪ್ಪು ಹೊಗೆ ಹೊರಬರುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಘಟನಾ ಸ್ಥಳದಲ್ಲಿ ನಾಲ್ವರು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಪೊಲೀಸರು ಮತ್ತು ಇತರ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ, ಆಸ್ಪತ್ರೆಗೆ ಕರೆದೊಯ್ಯಲಾದ ಇತರ ನಾಲ್ವರು ಪ್ರಜ್ಞಾಹೀನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಅಪಾರ್ಟ್ಮೆಂಟ್ ಮೊದಲ ಮಹಡಿಯಲ್ಲಿ ಎಲ್ಲಾ ಎಂಟು ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ಅದು ಹೇಳಿದೆ.

ಸುಮಾರು ಒಂದು ಗಂಟೆಯ ನಂತರ ಬೆಂಕಿಯನ್ನು ನಂದಿಸಲಾಯಿತು.

300 ಚದರ ಮೀಟರ್ ಕಟ್ಟಡದ ಮೊದಲ ಮತ್ತು ಎರಡನೇ ಮಹಡಿಗಳ ಒಟ್ಟು 60 ಚದರ ಮೀಟರ್ ಬೆಂಕಿಗೆ ಆಹುತಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು