ರಿಯಾದ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಸೌದಿ ಅರೇಬಿಯಾ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಬುಧವಾರ ಪ್ಯಾಲೆಸ್ತೀನ್-ಇಸ್ರೇಲಿ ಸಂಘರ್ಷದ ಬಗ್ಗೆ ಚರ್ಚಿಸಿದ್ದಾರೆ. “ಪ್ಯಾಲೆಸ್ತೀನ್ ವಿರುದ್ಧದ ಯುದ್ಧವನ್ನು ಕೊನೆಗೊಳಿಸುವ ಅಗತ್ಯ” ಕುರಿತು ಇಬ್ಬರು ನಾಯಕರು ಚರ್ಚಿಸಿದರು ಎಂದು ಇರಾನ್ ರಾಜ್ಯ ಮಾಧ್ಯಮ ತಿಳಿಸಿದೆ.
ಸೌದಿ ರಾಜಕುಮಾರ, ಸಲ್ಮಾನ್ ಸದ್ಯ ನಡೆಯುತ್ತಿರುವ ಯುದ್ದವನ್ನು ತಡೆಯಲು ಎಲ್ಲಾ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳೊಂದಿಗೆ ಸಂವಹನ ನಡೆಸುವಲ್ಲಿ ಸೌದಿ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. ಸೌದಿ ಅರೇಬಿಯಾ ಮತ್ತು ಇರಾನ್ ಏಳು ವರ್ಷಗಳ ಹಗೆತನದ ನಂತರ ಚೀನಾದ ಮಧ್ಯಸ್ಥಿಕೆಯಲ್ಲಿ ಮಾರ್ಚ್ನಲ್ಲಿ ಸಂಬಂಧಗಳನ್ನು ಪುನರಾರಂಭಿಸಲು ಒಪ್ಪಿಕೊಂಡವು.