ವಿದೇಶ

ಚೀನಾ ಅಧ್ಯಕ್ಷರ ಭೇಟಿಗೆ ವೊಲೊಡಿಮಿರ್ ಝೆಲೆನ್‌ಸ್ಕಿ ಚಿಂತನೆ

ಕೀವ್: ರಷ್ಯಾ ಮತ್ತು ಉಕ್ರೇನ್‌ ಯುದ್ದವನ್ನು ಕೊನೆಗಳಿಸುವ ಸಲುವಾಗಿ ಮಾತುಕತೆ ನಡೆಸಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಲು ಚಿಂತಿಸಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ  ಹೇಳಿದ್ದಾರೆ.

ಶುಕ್ರವಾರ ಬೀಜಿಂಗ್‌ನಲ್ಲಿ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ 12 ಅಂಶಗಳಲ್ಲಿ ಈ ಅಂಶವನ್ನು ಉಲ್ಲೇಖಿಸಿದ್ದು, ಮಾತುಕತೆ ಮತ್ತು ಸಂಧಾನವು ಉಕ್ರೇನ್ ಬಿಕ್ಕಟ್ಟಿಗೆ ಏಕೈಕ ಕಾರ್ಯಸಾಧ್ಯವಾದ ಪರಿಹಾರವಾಗಿದೆ ಎಂದು ಚೀನಾ ಹೇಳಿದೆ.

ಕಾದಾಡುತ್ತಿರುವ ಎರಡು ಪಕ್ಷಗಳ ನಡುವೆ ಶಾಂತಿ ಮಾತುಕತೆ ಪುನರಾರಂಭಿಸಲು, ಏಕಪಕ್ಷೀಯ ನಿರ್ಬಂಧಗಳನ್ನು ಕೊನೆಗೊಳಿಸಲು ಮತ್ತು ಪರಮಾಣು ಶಸ್ತ್ರಾಸ್ತ್ರಗಳ ಬಳಕೆಗೆ ತಡೆ ಹಾಕಬೇಕು ಎಂದು ಚೀನಾ ಕರೆ ನೀಡಿದೆ. ಸಾಧ್ಯವಾದಷ್ಟು ಬೇಗ ನೇರ ಸಂವಾದವನ್ನು ಪುನರಾರಂಭಿಸಬೇಕು, ಇದರಿಂದಾಗಿ ಪರಿಸ್ಥಿತಿ ಕ್ರಮೇಣ ಶಾಂತವಾಗಬಹುದು ಎಂದು ಚೀನಾ ಹೇಳಿದೆ.

ಈ ನಿಟ್ಟಿನಲ್ಲಿ ನಾನು ಚೀನಾ ಅಧ್ಯಕ್ಷರನ್ನು ಭೇಟಿಯಾಗಲು ಉತ್ಸುಕರಾಗಿರುವುದಾಗಿ ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ತಿಳಿಸಿದ್ದಾರೆ.

Gayathri SG

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

14 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

41 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

50 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago