Categories: ವಿದೇಶ

ಉಗ್ರವಾದ ರಫ್ತು ಮಾಡುವವರನ್ನು ಮೆಟ್ಟಿ ನಿಲ್ಲುವ ತಾಕತ್ತು ಬೇಕು: ಅಮೆರಿಕದಲ್ಲಿ ಪ್ರಧಾನಿ ಮೋದಿ

ವಾಷಿಂಗ್ಟನ್‌: ಉಗ್ರವಾದ ಮನುಕುಲದ ಶತ್ರು, ಅದಕ್ಕೆ ಯಾವುದೇ ಸಮರ್ಥನೆಗಳಾಗಲೀ, ಕ್ಷಮೆಯಾಗಲೀ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಮೇರಿಕಾ ಅಧ್ಯಕ್ಷರೊಂದಿಗೆ ದ್ವಿಪಕ್ಷಿಯ ಮಾತುಕತೆ, ಜಂಟಿ ಸುದ್ದಿಗೋಷ್ಠಿಯ ಬಳಿಕ ಕಾಂಗ್ರೆಸ್ ನ ಜಂಟಿ ಸದನವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಯುಎಸ್ ನ ಕಾಂಗ್ರೆಸ್ ನ್ನುದ್ದೇಶಿಸಿ ಮಾತನಾಡುವುದು ಎಂದಿಗೂ ಅತ್ಯಂತ ಗೌರವದ ಸಂಗತಿಯಾಗಿದ್ದು, ಎರಡು ಬಾರಿ ಕಾಂಗ್ರೆಸ್ ನ ಜಂಟಿ ಸದನವನ್ನುದ್ದೇಶಿಸಿ ಮಾತನಾಡಲು ಅವಕಾಶ ಲಭಿಸಿದ್ದು ಅಸಾಧಾರಣವಾದುದ್ದಾಗಿದೆ. ಈ ಗೌರವಕ್ಕಾಗಿ ನಾನು ಭಾರತದ 1.4 ಶತಕೋಟಿ ಜನರಿಗೆ ನನ್ನ ಆಳವಾದ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನಿಮ್ಮಲ್ಲಿ ಅರ್ಧದಷ್ಟು ಮಂದಿ 2016 ರಲ್ಲಿಯೂ ಇಲ್ಲಿ ಇದ್ದರು. ಹಳೆಯ ಸ್ನೇಹಿತರಲ್ಲಿ ಹಾಗೂ ಇನ್ನರ್ಧ ಇರುವ ಹೊಸ ಸ್ನೇಹಿತರಲ್ಲಿ ನಾನು ಉತ್ಸಾಹವನ್ನು ಕಾಣುತ್ತಿದ್ದೇನೆ ಎಂದು ಮೋದಿ ಜಂಟಿ ಸದಸನದ ಸದಸ್ಯರನ್ನುದ್ದೇಶಿಸಿ ಮಾತನಾಡಿದರು.
ತಮ್ಮ ಭಾಷಣದಲ್ಲಿ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವು ಪ್ರಕಟಿಸಿದ ಪ್ರಧಾನಿ ಮೋದಿ, ಉಗ್ರವಾದ ಮನುಕುಲದ ಶತ್ರು, ಅದಕ್ಕೆ ಯಾವುದೇ ಸಮರ್ಥನೆಗಳಾಗಲೀ, ಕ್ಷಮೆಯಾಗಲೀ ಇಲ್ಲ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.

9/11 ನ ಎರಡು ದಶಕಗಳು ಹಾಗೂ ಮುಂಬೈ ನ 26/11 ಘಟಿಸಿದ ಒಂದು ದಶಕಗಳ ಬಳಿಕವೂ ತೀವ್ರವಾದ ಹಾಗೂ ಭಯೋತ್ಪಾದನೆ ಜಗತ್ತಿನ್ನು ಕಾಡುತ್ತಿರ ಆಪತ್ತಾಗಿಯೇ ಉಳಿದುಕೊಂಡಿದೆ ಎಂದು ಮೋದಿ ಹೇಳಿದ್ದಾರೆ.

ಭಯೋತ್ಪಾದನೆ ವಿಷಯದಲ್ಲಿ ಸಮರ್ಥನೆ, ಕ್ಷಮೆಗಳಿಗೆ ಅವಕಾಶವಿಲ್ಲ. ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಹಾಗೂ ರಪ್ತು ಮಾಡುತ್ತಿರುವ ಶಕ್ತಿಗಳನ್ನು ಮೆಟ್ಟಿ ನಿಲ್ಲಬೇಕಿದೆ ಎಂದು ಮೋದಿ ಕರೆ ನೀಡಿದ್ದಾರೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago