Bengaluru 22°C
Ad

ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿ

ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ.

ನವದೆಹಲಿ : ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ದನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ, ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. ಇನ್ನು ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸಂಗಲ್ದನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. . USBRL(Udhampur-Srinagar-Baramulla Rail link) ಗಾಗಿ ಎಲ್ಲಾ ನಿರ್ಮಾಣ ಕಾರ್ಯಗಳು ಬಹುತೇಕ ಪೂರ್ಣಗೊಂಡಿವೆ. ಆದರೆ, ಸುರಂಗ ಸಂಖ್ಯೆ 1 ಮಾತ್ರ ಭಾಗಶಃ ಅಪೂರ್ಣವಾಗಿ ಉಳಿದಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Ad
Ad
Nk Channel Final 21 09 2023
Ad